ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು: ಕುಮಾರಸ್ವಾಮಿ
2016 ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪಿಎಸ್ ಐ ನೇಮಕಾತಿಯಲ್ಲಿ ಹಗರಣ ನಡೆದಿತ್ತು, ಅವರ ಅಧಿಕಾರಾವಧಿ ಭಷ್ಟಾಚಾರದ ಕೂಪವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಸೋಮಾವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡುವಾಗ ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರನ್ನು (Siddaramaiah) ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. 2023ರ ವಿಧಾನ ಸಭಾ ಚುನಾವಣೆ (Assembly polls) ತನ್ನ ಕೊನೆಯ ಚುನಾವಣೆ ಎಂದಿರುವ ಸಿದ್ದರಾಮಯ್ಯ ರಾಜ್ಯದಲ್ಲಿರುವ ಭ್ರಷ್ಟ ಸರ್ಕಾರವನ್ನು ಸೋಲಿಸಲು ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ. 2016 ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪಿಎಸ್ ಐ ನೇಮಕಾತಿಯಲ್ಲಿ ಹಗರಣ ನಡೆದಿತ್ತು, ಅವರ ಅಧಿಕಾರಾವಧಿ ಭಷ್ಟಾಚಾರದ ಕೂಪವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು.