ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!

Edited By:

Updated on: May 09, 2026 | 10:52 AM

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ದಾವಣಗೆರೆ, ಮೇ 09: ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯ ರಾಂಪುರ ಗ್ರಾಮದ ಬಳಿ ತುಂಗಭದ್ರ ನದಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ನದಿಯ ದಡದಲ್ಲಿ ಮೊಸಳೆ ಸುತ್ತಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ನಿತ್ಯ ಸ್ನಾನ ಹಾಗೂ ಬಟ್ಟೆ ಒಗೆಯಲು ನದಿಗೆ ಬರುವ ಗ್ರಾಮಸ್ಥರು ಮತ್ತು ಜಾನುವಾರುಗಳಿಗೆ ಈಗ ಪ್ರಾಣಭಯ ಶುರುವಾಗಿದೆ. ಇದೇ ಪ್ರದೇಶದಲ್ಲಿ ಮರಳು ಗಣಿಗಾರಿಕೆಯೂ ನಡೆಯುತ್ತಿದ್ದು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಮೊಸಳೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More