ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ: ನಿಯಂತ್ರಿಸಲು ಹರಸಾಹಸ

Updated By: Ganapathi Sharma

Updated on: Jul 09, 2025 | 10:51 AM

ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, 4 ವಿಶೇಷ ಕೌಂಟರ್​ಗಳನ್ನು ತೆರೆಯಲಾಗಿದೆ. ಇದೀಗ ಮೈಸೂರಿನ ಜಯದೇವ ಆಸ್ಪತ್ರೆಗೆ ಜನಸಾಗರವೇ ಹರಿದುಬರುತ್ತಿದೆ. ಬುಧವಾರ ಬೆಳಗ್ಗೆಯೇ ಸಾವಿರಾರು ಜನರು ಆಸ್ಪತ್ರೆಗೆ ಬಂದು ಗೊಂದಲ ಸೃಷ್ಟಿಯಾಯಿತು. ವಿಡಿಯೋ ಇಲ್ಲಿದೆ ನೋಡಿ.

ಮೈಸೂರು, ಜುಲೈ 9: ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಜನರ ನಿದ್ದೆಗೆಡಿಸಿದೆ. ಪರಿಣಾಮವಾಗಿ ಹೃದಯದ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದ್ದು, ಜನರನ್ನು ನಿಯಂತ್ರಿಸುವುದೇ ವೈದ್ಯಕೀಯ ಸಿಬ್ಬಂದಿಗೆ ಸವಾಲಾಗುತ್ತಿದೆ. ಮೈಸೂರಿನ ಜಯದೇವ ಆಸ್ಪತ್ರೆಗೆ ಬುಧವಾರ ಬೆಳ್ಳಂಬಳಗ್ಗೆಯೇ ಸಾವಿರಾರು ಜನ ಆಗಮಿಸಿದ್ದಾರೆ. ಆತಂಕ ಬೇಡ ಎಂದು ವೈದ್ಯರು ಹೇಳಿದ್ದರೂ ಸಾವಿರಾರು ಜನರು ಆಸ್ಪತ್ರೆ ಹೊರಗೆ ಸಾಲುಗಟ್ಟಿ ನಿಂತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ