AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನೋತ್ಸವಕ್ಕೆ ಮೊದಲ ದಿನವೇ ಭಕ್ತಸಾಗರ; ಮಡ್ಲಕ್ಕಿ ಅರ್ಪಣೆಗೆ ನೇರ ಅವಕಾಶಕ್ಕೆ ಮನವಿ

ಹಾಸನಾಂಬೆ ದರ್ಶನೋತ್ಸವಕ್ಕೆ ಮೊದಲ ದಿನವೇ ಭಕ್ತಸಾಗರ; ಮಡ್ಲಕ್ಕಿ ಅರ್ಪಣೆಗೆ ನೇರ ಅವಕಾಶಕ್ಕೆ ಮನವಿ

ಅಕ್ಷತಾ ವರ್ಕಾಡಿ
|

Updated on: Oct 30, 2026 | 9:39 AM

Share

ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಹಾಸನಾಂಬೆ ದೇವಾಲಯದ ಗರ್ಭಗುಡಿ 2026ರ ದರ್ಶನೋತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಸಹಸ್ರಾರು ಭಕ್ತರು ದೇವಿಯ ದರ್ಶನಕ್ಕೆ ಹರಿದುಬಂದಿದ್ದಾರೆ. ಅಕ್ಟೋಬರ್ 29ರ ಮಧ್ಯರಾತ್ರಿ 12:28ಕ್ಕೆ ಶುಭ ಮುಹೂರ್ತದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಇಂದು ಬೆಳಿಗ್ಗೆ 6 ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಹಾಸನಾಂಬೆ ದರ್ಶನೋತ್ಸವ ಅಧಿಕೃತ ಚಾಲನೆ ದೊರೆತಿದ್ದು, ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಹಾಸನಕ್ಕೆ ಆಗಮಿಸುತ್ತಿದ್ದು, ದೇವಸ್ಥಾನದ ಸುತ್ತಮುತ್ತ ಭಾರೀ ಜನಸಂದಣಿ ಕಂಡುಬಂದಿದೆ. ದರ್ಶನಕ್ಕೆ ಆಗಮಿಸಿದ್ದ ಹೊಳೆನರಸೀಪುರದ ಭಕ್ತರೊಬ್ಬರು ಮಾತನಾಡಿ, “ನಾವು ಬೆಳಿಗ್ಗೆ 5:30ಕ್ಕೆ ಬಂದಿದ್ದೇವೆ. ಮೊದಲ ದಿನವೇ ಇಷ್ಟೊಂದು ಜನಸಂದಣಿ ಇರುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಭಕ್ತರ ಸಂಖ್ಯೆ ಹೆಚ್ಚಾಗಿದೆ” ಎಂದು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಇನ್ನೊಬ್ಬರು ಕಳೆದ 35 ವರ್ಷಗಳಿಂದ ನಿರಂತರವಾಗಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವುದಾಗಿ ತಿಳಿಸಿದ್ದು, ಮಡ್ಲಕ್ಕಿ ಅರ್ಪಣೆ ಮಾಡುವ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ನೇರವಾಗಿ ದೇವಿಗೆ ಮಡ್ಲಕ್ಕಿ ಅರ್ಪಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More