ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; 7 ಜನರಿಗೆ ಗಾಯ

ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; 7 ಜನರಿಗೆ ಗಾಯ

ಸುಷ್ಮಾ ಚಕ್ರೆ
|

Updated on: Feb 05, 2025 | 4:27 PM

ತಮಿಳುನಾಡಿನ ಶಿವಕಾಶಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ, ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಜನವರಿ 4, 2025 ರಂದು ತಮಿಳುನಾಡಿನ ವಿರುಧುನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದರು ಮತ್ತು ಕೆಲವರು ಗಾಯಗೊಂಡಿದ್ದರು.

ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಭಾರಿ ಸ್ಫೋಟ ಸಂಭವಿಸಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ಸ್ಫೋಟದಲ್ಲಿ 7 ಜನರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ