AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 05, 2026 | 6:38 AM

Share

Fire Accident in Vijayapura: ವಿಜಯಪುರದ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಸುಮಾರು 1 ಕೋಟಿ ರೂ.ಗೂ ಅಧಿಕ ಮೌಲ್ಯದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆ ವೇಳೆ ಸರ್ವೀಸ್ ಸೆಂಟರ್​​ನಲ್ಲಿ ಯಾರೂ ಇಲ್ಲದೇ ಇದ್ದುದ್ದರಿಂದ ಸಾವು-ನೋವು ತಪ್ಪಿದೆ.

ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಸುಟ್ಟುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್, ಘಟನೆ ಸಮಯದಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿರುವ ಕಾರಣ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More