ಮುಂಬೈನ ಡಿಪೋದಲ್ಲಿ ಭಾರೀ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಬಸ್‌ಗಳು

Updated on: Oct 05, 2026 | 10:53 PM

ಅಪಘಾತ ಸಂಭವಿಸಿದ ಸಮಯದಲ್ಲಿ ಡಿಪೋದಲ್ಲಿದ್ದ ಸಿಬ್ಬಂದಿ ಹಾಗೂ ಚಾಲಕರು ತಕ್ಷಣವೇ ಹೊರಗೆ ಓಡಿಬಂದಿದ್ದರಿಂದ ಭಾರಿ ಜೀವಹಾನಿ ತಪ್ಪಿದೆ ಎನ್ನಲಾಗಿದ್ದು, ನಿಖರವಾದ ಹಾನಿಯ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಸಿಎನ್‌ಜಿ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬುದರ ಕುರಿತು ತನಿಖೆ ನಡೆಸಲು ಸಾರಿಗೆ ಇಲಾಖೆ ಹಾಗೂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಮುಂಬೈ, ಅಕ್ಟೋಬರ್ 5: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಪ್ರಮುಖ ಬಸ್ ಡಿಪೋ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸಿಎನ್‌ಜಿ ಚಾಲಿತ ಹಲವಾರು ಬಸ್‌ಗಳು ಧಗಧಗನೆ ಹೊತ್ತಿ ಉರಿದಿವೆ. ಡಿಪೋದಲ್ಲಿ ನಿಲ್ಲಿಸಲಾಗಿದ್ದ ಸಿಎನ್‌ಜಿ ಬಸ್‌ಗಳಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದ ಸಾಲು ಸಾಲು ಬಸ್‌ಗಳಿಗೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಘಟನೆಯ ಸ್ಥಳದಿಂದ ಬೃಹತ್ ಪ್ರಮಾಣದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಮುಟ್ಟುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.  ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಧಾವಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲು ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ.

ಅಪಘಾತ ಸಂಭವಿಸಿದ ಸಮಯದಲ್ಲಿ ಡಿಪೋದಲ್ಲಿದ್ದ ಸಿಬ್ಬಂದಿ ಹಾಗೂ ಚಾಲಕರು ತಕ್ಷಣವೇ ಹೊರಗೆ ಓಡಿಬಂದಿದ್ದರಿಂದ ಭಾರಿ ಜೀವಹಾನಿ ತಪ್ಪಿದೆ ಎನ್ನಲಾಗಿದ್ದು, ನಿಖರವಾದ ಹಾನಿಯ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಸಿಎನ್‌ಜಿ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿದೆಯೇ ಎಂಬುದರ ಕುರಿತು ತನಿಖೆ ನಡೆಸಲು ಸಾರಿಗೆ ಇಲಾಖೆ ಹಾಗೂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More