ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

Updated on: Feb 22, 2026 | 5:01 PM

ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿವೆ.

ನೆಲಮಂಗಲ, (ಫೆಬ್ರವರಿ 22) : ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿವೆ.

ಅಂತಿಮವಾಗಿ 10 ವಾಹನಗಳಿಂದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದೆ. ಮಾಕಳಿ ಗ್ರಾಮದ ಲೋಕೇಶ್ ಎಂಬುವವರಿಗೆ ಸೇರಿದ ಗೋದಾಮಿನಲ್ಲಿದ್ದ 20 ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳು ಭಸ್ಮವಾಗಿವೆ.ಮೂರು ಖಾಸಗಿ ಕಂಪನಿಗಳಿಗೆ ಎಸಿ, ಫ್ರಿಡ್ಜ್, ಪರ್ಫ್ಯೂಮ್, ಪೆಡಿಗ್ರಿ ಗೋದಾಮಿಗೆ ಬಾಡಿಗೆಗೆ ನೀಡಿದ್ದರು. ಮೊದಲು ಪರ್ಫ್ಯೂಮ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಗ್ಯಾಸ್ ಸ್ಫೋಟಗೊಂಡು ಪಕ್ಕದ ಗೋದಾಮಿಗೂ ಬೆಂಕಿ ತಗುಲಿತ್ತು. ಗೋದಾಮುಗಳಲ್ಲಿ 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಐವರು ಗಾಯಗೊಂಡಿದ್ರು, ಮೂವರ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More