ನೆಲಮಂಗಲ: ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲದ ಅಡಕಮಾರನಹಳ್ಳಿ ಸಮೀಪ ಸೋಮವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕದಳದ 20ಕ್ಕೂ ಹೆಚ್ಚು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಆದಾಗ್ಯೂ ಬೆಂಕಿ ನಂದಿಸುವುದು ಸಾಧ್ಯವಾಗಿಲ್ಲ. ಅಡಕಮಾರನಹಳ್ಳಿಯಲ್ಲಿ ಸಂಭವಿಸಿದ ಭಯಾನಕ ಬೆಂಕಿ ಅವಘಡದ ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಮೇ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಸುಮಾರು 40 ಸಾವಿರ ಅಡಿಯ ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದ್ದು, ಸುಮಾರು 30 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಮಾಜಿ ಸಚಿವ ಎಚ್ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪಗೆ ಸೇರಿದ ಗೋದಾಮು ಇದಾಗಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.
ವಿಡಿಯೋ ಮತ್ತು ವರದಿ: ಮಂಜುನಾಥ್ ನೆಲಮಂಗಲ, ಟಿವಿ9
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 13, 2025 08:47 AM
Latest Videos

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್

6,6,6,6,6:: ಬಿರುಗಾಳಿ ಬ್ಯಾಟಿಂಗ್ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

‘ಎಸ್ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್

ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
