ನೆಲಮಂಗಲ: ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು

Updated on: May 13, 2025 | 2:30 PM

ನೆಲಮಂಗಲದ ಅಡಕಮಾರನಹಳ್ಳಿ ಸಮೀಪ ಸೋಮವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕದಳದ 20ಕ್ಕೂ ಹೆಚ್ಚು ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಆದಾಗ್ಯೂ ಬೆಂಕಿ ನಂದಿಸುವುದು ಸಾಧ್ಯವಾಗಿಲ್ಲ. ಅಡಕಮಾರನಹಳ್ಳಿಯಲ್ಲಿ ಸಂಭವಿಸಿದ ಭಯಾನಕ ಬೆಂಕಿ ಅವಘಡದ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ಆಯಿಲ್ ಗೋಡೌನ್​ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಸುಮಾರು 40 ಸಾವಿರ ಅಡಿಯ ಗೋದಾಮಿನಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದ್ದು, ಸುಮಾರು 30 ಕೋಟಿ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. ಮಾಜಿ ಸಚಿವ ಎಚ್​​ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪಗೆ ಸೇರಿದ ಗೋದಾಮು ಇದಾಗಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

ವಿಡಿಯೋ ಮತ್ತು ವರದಿ: ಮಂಜುನಾಥ್ ನೆಲಮಂಗಲ, ಟಿವಿ9

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 13, 2025 08:47 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More