12 ಗಂಟೆ ಕಾಲ ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ನೀರಿನ ಗಾಡಿ ಬಂದರೂ ಆರದ ಬೆಂಕಿ

Updated on: May 13, 2025 | 5:24 PM

ಆಯಿಲ್ ಗೋದಾಮಿ ಧಗಧಗನೆ ಬೆಂಕಿ ಹೊತ್ತಿ ಉರಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ನಡೆದಿದೆ. ಬೆಂಕಿಗಾಹುತಿಯಾಗಿರೋ ಆಯಿಲ್ ಗೋದಾಮು ಕೃಷ್ಣಪ್ಪ ಎಂಬುವರಿಗೆ ಸೇರಿದ್ದು,. ಕೃಷ್ಣಪ್ಪ ಅವರು ಸೌತ್ ಕರ್ನಾಟಕ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಹೀಗಾಗಿ ಶೆಲ್ ಕಂಪನಿಗೆ ಬಾಡಿಗೆ ನೀಡಲಾಗಿತ್ತು. ಆದ್ರೆ, ಶಾರ್ಟ್ ಸರ್ಕ್ಯೂಟ್​ನಿಂದ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಆಯಿಲ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, (ಮೇ 13): ಆಯಿಲ್ ಗೋದಾಮಿ ಧಗಧಗನೆ ಬೆಂಕಿ ಹೊತ್ತಿ ಉರಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ನಡೆದಿದೆ. ಬೆಂಕಿಗಾಹುತಿಯಾಗಿರೋ ಆಯಿಲ್ ಗೋದಾಮು ಕೃಷ್ಣಪ್ಪ ಎಂಬುವರಿಗೆ ಸೇರಿದ್ದು,. ಕೃಷ್ಣಪ್ಪ ಅವರು ಸೌತ್ ಕರ್ನಾಟಕ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಹೀಗಾಗಿ ಶೆಲ್ ಕಂಪನಿಗೆ ಬಾಡಿಗೆ ನೀಡಲಾಗಿತ್ತು. ಆದ್ರೆ, ಶಾರ್ಟ್ ಸರ್ಕ್ಯೂಟ್​ನಿಂದ ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಆಯಿಲ್ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. 60ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಸತತ 12 ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಇನ್ನು ನೀರಿನ ಕೊರತೆಯಿಂದಾಗಿ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಪರದಾಡಿದರು. ಈ ಸಂಬಂಧ ಮಾದನಾಯಕನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಇನ್ನು ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಿಕ್ಕೆ ಚಿಮ್ಮುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ಸಹ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ಅಗ್ನಿಯ ಜ್ವಾಲೆ ಏರುತ್ತಲೇ ಇತ್ತು.

Published on: May 13, 2025 05:22 PM