ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ; ಗ್ಯಾಸ್ ಸಿಲಿಂಡರ್‌ಗಳ ಸರಣಿ ಸ್ಪೋಟ

Updated on: Oct 08, 2026 | 7:36 PM

ಎಲ್​ಪಿಜಿ ಸಿಲಿಂಡರ್ ಸ್ಪೋಟಗೊಂಡಿದ್ದೇ ಈ ಅನಾಹುತಕ್ಕೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಶಿಬಿರದಲ್ಲಿದ್ದ ಒಟ್ಟು 7 ಗ್ಯಾಸ್ ಸಿಲಿಂಡರ್‌ಗಳು ಸರಣಿಯಾಗಿ ಸ್ಪೋಟಗೊಂಡಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಶಿಬಿರದಲ್ಲಿದ್ದ ಎಲ್ಲ ಕಾರ್ಮಿಕರನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ರವಾನಿಸಲಾಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ವರದಿಯಾಗಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣವನ್ನು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಮುಂಬೈ, ಅಕ್ಟೋಬರ್ 8: ಮುಂಬೈನ ಮುಲುಂಡ್ ಪೂರ್ವ ಭಾಗದ ಟಾಟಾ ಕಾಲೋನಿಯಲ್ಲಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಕಾರ್ಮಿಕರ ಕ್ಯಾಂಪ್​ನಲ್ಲಿ ಇಂದು ಸಂಜೆ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. ಧಾರಾವಿ ಪುನರ್ವಸತಿ ಯೋಜನೆಯಡಿ ಶಾಪುರ್ಜಿ ಪಲ್ಲೊಂಜಿ ಗ್ರೂಪ್ ಅಭಿವೃದ್ಧಿಪಡಿಸುತ್ತಿರುವ ಈ ಯೋಜನೆಯಲ್ಲಿ ನೂರಾರು ಕಾರ್ಮಿಕರು ವಾಸಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾರ್ಮಿಕರಲ್ಲಿ ಭಾರಿ ಆತಂಕ ಹಾಗೂ ಕಾಲ್ತುಳಿತದಂತಹ ವಾತಾವರಣ ನಿರ್ಮಾಣವಾಯಿತು.

ಎಲ್​ಪಿಜಿ ಸಿಲಿಂಡರ್ ಸ್ಪೋಟಗೊಂಡಿದ್ದೇ ಈ ಅನಾಹುತಕ್ಕೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಶಿಬಿರದಲ್ಲಿದ್ದ ಒಟ್ಟು 7 ಗ್ಯಾಸ್ ಸಿಲಿಂಡರ್‌ಗಳು ಸರಣಿಯಾಗಿ ಸ್ಪೋಟಗೊಂಡಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಶಿಬಿರದಲ್ಲಿದ್ದ ಎಲ್ಲ ಕಾರ್ಮಿಕರನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ರವಾನಿಸಲಾಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ವರದಿಯಾಗಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣವನ್ನು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More