ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

Edited By:

Updated on: Feb 09, 2026 | 6:53 AM

ಮೈಸೂರಿನ ಕೆಸರೆ ಬಡಾವಣೆಯಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿ 4ಕ್ಕೂ ಹೆಚ್ಚು ಗೋದಾಮುಗಳು ಅಗ್ನಿಗಾಹುತಿಯಾಗಿವೆ. ಅವಘಡದ ನಿಖರ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಬೆಂಕಿಹಚ್ಚಿರುವ ಶಂಕೆಯೂ ವ್ಯಕ್ತವಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮೈಸೂರಿನ ಎನ್.ಆರ್. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು.

ಅದೃಷ್ಟವಶಾತ್, ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗೋದಾಮುಗಳಲ್ಲಿ ಸಂಗ್ರಹಿಸಿದ್ದ ಹಳೆಯ ವಸ್ತುಗಳು ಮತ್ತು ಸುಲಭವಾಗಿ ಹೊತ್ತಿ ಉರಿಯುವ ಸಾಮಗ್ರಿಗಳು ಇದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿತು ಎಂದು ತಿಳಿದುಬಂದಿದೆ. ಬೆಂಕಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿರುವ ಸಾಧ್ಯತೆ ಇದೆ. ಕುಡಿದ ಮತ್ತಿನಲ್ಲಿ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆಯು ಮೈಸೂರಿನ ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 09, 2026 06:52 AM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More