ಥಾಣೆಯ ತಿಂಡಿ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ; ವಿಡಿಯೋ ವೈರಲ್

|

Updated on: Oct 02, 2024 | 10:32 PM

ಥಾಣೆಯ ಸ್ನಾಕ್ಸ್​ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದೆ. 12ಕ್ಕೂ ಹೆಚ್ಚು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿವೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಾಗ್ಲೆ ಎಸ್ಟೇಟ್‌ನಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಬಹು ಕಾರ್ಖಾನೆಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಾಗ್ಲೆ ಎಸ್ಟೇಟ್ ವಿವಿಧ ಆಹಾರ ಪದಾರ್ಥಗಳನ್ನು ಉತ್ಪಾದಿಸುವ ಹಲವಾರು ಕಾರ್ಖಾನೆಗಳನ್ನು ಹೊಂದಿದೆ. ಆರಂಭದಲ್ಲಿ ಚಿಪ್ಸ್ ತಯಾರಿಸುವ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಇತರ ಕಾರ್ಖಾನೆಗಳಿಗೂ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ