Video: ಲೋಕಬಂಧು ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಸೋಮವಾರ ತಡರಾತ್ರಿ ಲಕ್ನೋದ ಲೋಕಬಂಧು ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಬ್ಬ ರೋಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿವಿಲ್ ಆಸ್ಪತ್ರೆ ನಿರ್ದೇಶಕ ರಾಜೇಶ್ ಶ್ರೀವಾಸ್ತವ, ಸುಮಾರು 24 ರೋಗಿಗಳನ್ನು ಚಿಕಿತ್ಸೆಗಾಗಿ ಕರೆತರಲಾಗಿದೆ ಎಂದು ದೃಢಪಡಿಸಿದರು. ಎಲ್ಲಾ ರೋಗಿಗಳು ಸ್ಥಿರವಾಗಿದ್ದು, ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಗಂಭೀರವಾಗಿದ್ದ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಈ ಆಸ್ಪತ್ರೆಗೆ ಬಂದವರೆಲ್ಲರೂ ಆರೋಗ್ಯವಾಗಿದ್ದಾರೆ ಮತ್ತು ಸ್ಥಿರರಾಗಿದ್ದಾರೆ. ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ದೇಹವನ್ನು ಶವಾಗಾರದಲ್ಲಿರಿಸಲಾಗಿದೆ ಎಂದು ಹೇಳಿದ್ದಾರೆ.
ಲಕ್ನೋ, ಏಪ್ರಿಲ್ 15: ಸೋಮವಾರ ತಡರಾತ್ರಿ ಲಕ್ನೋದ ಲೋಕಬಂಧು ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಬ್ಬ ರೋಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿವಿಲ್ ಆಸ್ಪತ್ರೆ ನಿರ್ದೇಶಕ ರಾಜೇಶ್ ಶ್ರೀವಾಸ್ತವ, ಸುಮಾರು 24 ರೋಗಿಗಳನ್ನು ಚಿಕಿತ್ಸೆಗಾಗಿ ಕರೆತರಲಾಗಿದೆ ಎಂದು ದೃಢಪಡಿಸಿದರು. ಎಲ್ಲಾ ರೋಗಿಗಳು ಸ್ಥಿರವಾಗಿದ್ದು, ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಗಂಭೀರವಾಗಿದ್ದ ಇಬ್ಬರನ್ನು ಐಸಿಯುಗೆ ದಾಖಲಿಸಲಾಗಿದೆ. ಈ ಆಸ್ಪತ್ರೆಗೆ ಬಂದವರೆಲ್ಲರೂ ಆರೋಗ್ಯವಾಗಿದ್ದಾರೆ ಮತ್ತು ಸ್ಥಿರರಾಗಿದ್ದಾರೆ. ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯ ದೇಹವನ್ನು ಶವಾಗಾರದಲ್ಲಿರಿಸಲಾಗಿದೆ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos