AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೇಶ್ವರದ ಕಾಟನ್ ಮಿಲ್‌ನಲ್ಲಿ ಭಾರಿ ಅಗ್ನಿ ಅವಘಡ: 85 ಲಕ್ಷ ರೂ. ಮೌಲ್ಯದ ಹತ್ತಿ ಭಸ್ಮ

ಲಕ್ಷ್ಮೇಶ್ವರದ ಕಾಟನ್ ಮಿಲ್‌ನಲ್ಲಿ ಭಾರಿ ಅಗ್ನಿ ಅವಘಡ: 85 ಲಕ್ಷ ರೂ. ಮೌಲ್ಯದ ಹತ್ತಿ ಭಸ್ಮ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 14, 2026 | 12:33 PM

Share

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 85 ಲಕ್ಷ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದ್ದು, 210 ಹತ್ತಿ ಬೇಲ್‌ಗಳು ಹಾಗೂ 120 ಕ್ವಿಂಟಾಲ್ ಹತ್ತಿ ನಾಶವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೂರರಿಂದ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಗದಗ, ಅಕ್ಟೋಬರ್​​ 14: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹುಬ್ಬಳ್ಳಿ ರಸ್ತೆ ಬಳಿಯ ಪದ್ಮಾವತಿ ಇಂಡಸ್ಟ್ರೀಸ್ ಫಿಲಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ನಡೆದಿದ್ದು, ಸುಮಾರು 85 ಲಕ್ಷ ಮೌಲ್ಯದ ಹತ್ತಿ ಬೆಂಕಿಗೆ ಆಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪದ್ಮಾವತಿ ಕಾಟನ್ ಇಂಡಸ್ಟ್ರೀಸ್ ಮ್ಯಾನೇಜರ್ ನಿಂಗರಾಜ್ ಹೇಳಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More