AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರಿನ ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ

ರಾಚಪ್ಪಾಜಿ ನಾಯ್ಕ್
| Edited By: |

Updated on:Apr 27, 2026 | 12:48 PM

Share

ಬೆಂಗಳೂರಿನ ನಂದಿನಿ ಲೇಔಟ್‌ನ ರಾಜಕುಮಾರ್ ಸ್ಮಾರಕದ ಬಳಿಯ ಎಲ್‌ಇಡಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಗೋಡೌನ್ ಸಂಪೂರ್ಣ ಭಸ್ಮವಾಗಿದ್ದು, ಪಕ್ಕದ ಪಿಜಿ ಹಾಗೂ ಮನೆಗಳಿಗೂ ಹಾನಿಯಾಗಿದೆ. 50 ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಬೆಂಗಳೂರು, ಏಪ್ರಿಲ್​​ 27: ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಲೂ ಲೀಫ್ ಎಲ್‌ಇಡಿ ಗೋಡೌನ್‌ನಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ನಡೆದಿದೆ. ಬ್ಯಾನರ್‌ಗಳು ಮತ್ತು ಎಲ್‌ಇಡಿ ಸ್ಕ್ರೀನ್‌ಗಳನ್ನು ಸಂಗ್ರಹಿಸಿ ವಿತರಿಸುತ್ತಿದ್ದ ಈ ಗೋಡೌನ್ ಬೆಂಕಿಗೆ ಆಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅನಾಹುತ ನಡೆದಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಗೋಡೌನ್ ಮುಂಭಾಗ ನಿಲ್ಲಿಸಿದ್ದ ಬುಲೆಟ್ ಮತ್ತು ಬೊಲೆರೊ ಪಿಕಪ್ ವಾಹನಗಳು ಕೂಡ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಲೇಡಿಸ್ ಪಿಜಿ ಕಟ್ಟಡ ಹಾಗೂ ಸುತ್ತಮುತ್ತಲಿನ ಮನೆಗಳಿಗೂ ವ್ಯಾಪಿಸಿದ ಪರಿಣಾಮ, ಅಪಾರ ಹಾನಿಯಾಗಿದೆ. ಪಿಜಿಯಲ್ಲಿದ್ದ ಸುಮಾರು 50 ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಬೆಂಕಿಯಿಂದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ ಮತ್ತು ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 27, 2026 12:47 PM
Follow Us