AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ  ಏಕಕಾಲಕ್ಕೆ 23 ಸಿಲಿಂಡರ್​​ಗಳು ಸ್ಫೋಟ: ಭಾರಿ ಅಗ್ನಿ ಅನಾಹುತ

ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್​​ಗಳು ಸ್ಫೋಟ: ಭಾರಿ ಅಗ್ನಿ ಅನಾಹುತ

ಮಂಜುನಾಥ ಎಚ್​. ವಿ.
| Edited By: |

Updated on:Oct 25, 2026 | 7:25 AM

Share

ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿನ ಮಳಿಗೆಯೊಂದರಲ್ಲಿ 23 ಗೃಹ ಬಳಕೆಯ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಈ ಘಟನೆಯಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಪೆಟ್ರೋಲ್, ಡೀಸೆಲ್, ಮತ್ತು ಸೀಮೆಎಣ್ಣೆ ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ, ಅಕ್ಟೋಬರ್​​ 25: ಮಳಿಗೆಯೊಂದರಲ್ಲಿ 23 ಸಿಲಿಂಡರ್‌ಗಳು ಏಕಕಾಲಕ್ಕೆ ಸ್ಫೋಟಗೊಂಡ ಪರಿಣಾಮ ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. 6 ಕೆ.ಜಿ. ತೂಕದ 23 ಸಿಲಿಂಡರ್‌ಗಳು ಒಂದರ ನಂತರ ಒಂದರಂತೆ ಸ್ಫೋಟಗೊಂಡಿದ್ದು, ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ಈ ಮಳಿಗೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಸೀಮೆಎಣ್ಣೆಯನ್ನು ಸಹ ಮಾರಾಟ ಮಾಡಲಾಗುತ್ತಿತ್ತು. ಇಂಧನಗಳ ದಾಸ್ತಾನು ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿರಬಹುದು ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಾಹುತ ನಡೆದಿದ್ದು, ಘಟನೆಗೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 25, 2026 07:23 AM

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More