AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ: ಸ್ಕ್ರ್ಯಾಪ್ ಗೋದಾಮು ಸಂಪೂರ್ಣ ಭಸ್ಮ

ಬೆಂಗಳೂರಿನ ಅಮೃತಹಳ್ಳಿ ಬಳಿ ಭಾರಿ ಅಗ್ನಿ ಅವಘಡ: ಸ್ಕ್ರ್ಯಾಪ್ ಗೋದಾಮು ಸಂಪೂರ್ಣ ಭಸ್ಮ

ಶಿವಪ್ರಸಾದ್​ ಬಿ.
| Edited By: |

Updated on: Nov 10, 2026 | 6:51 AM

Share

ಬೆಂಗಳೂರಿನ ಅಮೃತಹಳ್ಳಿ ಬಳಿಯ ದಾಸರಹಳ್ಳಿಯಲ್ಲಿರುವ ಪ್ಲಾಸ್ಟಿಕ್ ಮತ್ತು ಇತರೆ ಸ್ಕ್ರ್ಯಾಪ್ ವಸ್ತುಗಳ ಗೋದಾಮು ಭಾರಿ ಅಗ್ನಿ ದುರಂತಕ್ಕೆ ತುತ್ತಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿವೆ. ತಮ್ಮ ಮನೆಗಳಿಗೆ ಬೆಂಕಿ ವ್ಯಾಪಿಸುವ ಆತಂಕದಲ್ಲಿದ್ದ ಗೋದಾಮಿನ ಅಕ್ಕ ಪಕ್ಕದ ನಿವಾಸಿಗಳು ಇದರಿಂದ ನಿಟ್ಟುಸಿರುಬಿಟ್ಟಿದ್ದಾರೆ.

ಬೆಂಗಳೂರು, ನವೆಂಬರ್​​ 10: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿ ಸಮೀಪದ ದಾಸರಹಳ್ಳಿಯಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಸ್ಕ್ರ್ಯಾಪ್ ಗೋದಾಮೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಪ್ಲಾಸ್ಟಿಕ್ ಮತ್ತು ಇತರೆ ಸ್ಕ್ರ್ಯಾಪ್ ವಸ್ತುಗಳನ್ನು ಸಂಗ್ರಹಿಸಿದ್ದ ಈ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಬೆಂಕಿಯ ತೀವ್ರತೆ ಕಂಡು ಗೋದಾಮಿನ ಅಕ್ಕ ಪಕ್ಕದ ನಿವಾಸಿಗರು ಬೆಂಕಿ ತಮ್ಮ ಮನೆಗಳಿಗೂ ವ್ಯಾಪಿಸಬಹುದೆಂಬ ಆತಂಕದಲ್ಲಿದ್ದರು. ಆದರೆ ಮಾಹಿತಿ ತಿಳಿದ ಕೂಡಲೇ ಮೂರು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸಿವೆ. ಇದರಿಂದ ಸಂಭವನೀಯ ದೊಡ್ಡ ಅನಾಹುತ ತಪ್ಪಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More