ಕಾಫಿ ತೋಟದತ್ತ ಹೆಜ್ಜೆ ಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!

Edited By:

Updated on: Jun 17, 2026 | 7:52 AM

ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರಲಗದ್ದೆ ಮತ್ತು ನಾರ್ವೆ ರಸ್ತೆ ಮಾರ್ಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ 25ಕ್ಕೂ ಹೆಚ್ಚು ಆನೆಗಳ ಬೃಹತ್ ಹಿಂಡು ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಭೀತಿ ಮೂಡಿಸಿದೆ. ಕಾಫಿ ತೋಟದಿಂದ ಮತ್ತೊಂದು ತೋಟಕ್ಕೆ ಗಜಪಡೆ ಪರೇಡ್ ನಡೆಸುತ್ತಿದ್ದು, ರಸ್ತೆ ದಾಟುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ.

ಹಾಸನ, ಮೇ 13: ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರಲಗದ್ದೆ ಮತ್ತು ನಾರ್ವೆ ರಸ್ತೆ ಮಾರ್ಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ 25ಕ್ಕೂ ಹೆಚ್ಚು ಆನೆಗಳ ಬೃಹತ್ ಹಿಂಡು ಪ್ರತ್ಯಕ್ಷವಾಗಿದ್ದು, ನಾಗರಿಕರಲ್ಲಿ ಭೀತಿ ಮೂಡಿಸಿದೆ. ಕಾಫಿ ತೋಟದಿಂದ ಮತ್ತೊಂದು ತೋಟಕ್ಕೆ ಗಜಪಡೆ ಪರೇಡ್ ನಡೆಸುತ್ತಿದ್ದು, ರಸ್ತೆ ದಾಟುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ.

ಆನೆಗಳ ಸಂಚಾರದಿಂದಾಗಿ ಅಪಾರ ಪ್ರಮಾಣದ ಕಾಫಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸದ್ಯ ಆನೆಗಳು ಕಾಫಿ ತೋಟಗಳಲ್ಲೇ ಬೀಡು ಬಿಟ್ಟಿದ್ದು, ಇಟಿಎಫ್ (ETF) ಸಿಬ್ಬಂದಿ ಸ್ಥಳದಲ್ಲಿದ್ದು ಜನರಿಗೆ ಎಚ್ಚರಿಕೆ ಹಾಗೂ ಮಾಹಿತಿ ನೀಡುತ್ತಿದ್ದಾರೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 13, 2026 02:27 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More