ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಬೆಂಗಳೂರು, ಮೇ 01: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ (LPG Gas cylinder Hike) ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಗ್ಯಾಸ್ ಅಭಾವದಿಂದ ಈಗಾಗಲೇ ಹೋಟೆಲ್ಗಳಲ್ಲಿ ಕಾಫಿ, ತಿಂಡಿ ಬೆಲೆ ಏರಿಕೆಯಾಗಿರುವುದು ಜನಸಾಮಾನ್ಯರಿಗೆ ತೊಂದರೆ ಉಂಟು ಮಾಡಿದೆ. ಇದೀಗ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿರುವುದರಿಂದ ಕಾಫಿ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಇದರಿಂದ ಬಡವರು, ಮಧ್ಯಮ ವರ್ಗದವರು ಕಾಫಿ ಕುಡಿಯಲೂ ಜನ 10 ಬಾರಿ ಯೋಚಿಸುವಂತಾಗಬಹುದು.ಅಂತಿಮವಾಗಿ ಇದರ ಹೊರೆ ಗ್ರಾಹಕರ ಮೇಲೆ ಬೀಳಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
