Video: ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ಇಂದು 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಬೋಧ್ ಗಯಾದ ಮಗಧ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದೊಡ್ಡ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಅವರು ರೈಲ್ವೆ, ರಸ್ತೆ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ಪಾಟ್ನಾ, ಆಗಸ್ಟ್ 22: ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ಇಂದು 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಬೋಧ್ ಗಯಾದ ಮಗಧ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದೊಡ್ಡ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಅವರು ರೈಲ್ವೆ, ರಸ್ತೆ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ಇವುಗಳಲ್ಲಿ ಮೊದಲನೆಯದು ಗಯಾ-ನವದೆಹಲಿ ಅಮೃತ್ ಭಾರತ್ ಎಕ್ಸ್‌ಪ್ರೆಸ್, ಇದು ವಾರಕ್ಕೆ ಎರಡು ಬಾರಿ ಚಲಿಸಲಿದ್ದು, ಬಿಹಾರ ಮತ್ತು ರಾಜಧಾನಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುತ್ತದೆ. ಎರಡನೇ ರೈಲು ವೈಶಾಲಿಯಿಂದ ಕೊಡೆರ್ಮಾಗೆ ಬೌದ್ಧ ಸರ್ಕ್ಯೂಟ್ ರೈಲು ಆಗಿದ್ದು, ಇದು ಪ್ರವಾಸೋದ್ಯಮ ಮತ್ತು ಧಾರ್ಮಿಕ ಸ್ಥಳಗಳೊಂದಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಬೇಗುಸರೈನಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಂಟಾ-ಸಿಮಾರಿಯಾ 6 ಪಥದ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಈ ಯೋಜನೆಯು ಜನರ ಬಹುಕಾಲದ ಬೇಡಿಕೆಯಾಗಿತ್ತು. ಸುಮಾರು 1,870 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು 8.15 ಕಿ.ಮೀ ಹೆದ್ದಾರಿ ವಿಭಾಗ ಮತ್ತು 1.86 ಕಿ.ಮೀ ಉದ್ದದ ಸೇತುವೆಯನ್ನು ಒಳಗೊಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ