ಬಸನಗೌಡ ಯತ್ನಾಳ್​ಗೆ ದೊಡ್ಡ ಅನ್ಯಾಯವಾಗಿದೆ, ಬಿಜೆಪಿ ಕಟ್ಟಿ ಬೆಳೆಸಿದವರಲ್ಲಿ ಅವರೂ ಒಬ್ಬ: ಶಿವರಾಜ ತಂಗಡಿಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 31, 2025 | 2:44 PM

ಬಿಜೆಪಿಯಲ್ಲಿ ಹಿರಿಯ ನಾಯಕರಿಗೆ ಗೌರವ ಇಲ್ಲ ಅಲ್ಲೋದು ಯತ್ನಾಳ್ ಉಚ್ಚಾಟನೆಯಿಂದ ಸ್ಪಷ್ಟವಾಗುತ್ತದೆ, ಬಿಜೆಪಿಗೆ ಉತ್ತರ ಕರ್ನಾಟಕದಲ್ಲಿ ಅವರಷ್ಟು ಪ್ರಭಾವಿ ನಾಯಕ ಯಾರೂ ಇಲ್ಲ, ಅದರೆ ಒಂದು ಮಾತು ಮಾತ್ರ ಸತ್ಯ, ಅವರ ಉಚ್ಚಾಟನೆಯಿಂದ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೊಪ್ಪಳ, ಮಾರ್ಚ್ 31: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಿಗಿ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಒಂದು ಕಾಲದಲ್ಲಿ ಜೊತೆಯಾಗಿದ್ದವರು. ಹಾಗಾಗೇ, ಸಚಿವನಿಗೆ ಯತ್ನಾಳ್ ಬಗ್ಗೆ ಸ್ವಲ್ಪ ಜಾಸ್ತಿಯೇ ಗೊತ್ತಿರಬಹುದು. ಯತ್ನಾಳ್, ಪಕ್ಷದ ಒಬ್ಬ ಹಿರಿಯ ನಾಯಕನಾಗಿದ್ದ ಯತ್ನಾಳ್ ಅವರಿಗೆ ತೀವ್ರ ಅನ್ಯಾಯವಾಗಿದೆ, ಯಾಕೆಂದರೆ ಬಿಎಸ್ ಯಡಿಯೂರಪ್ಪ ಮತ್ತು ಅನಂತಕುಮಾರ್ ಪಕ್ಷವನ್ನು ಕಟ್ಟುವಾಗ ಅವರೊಂದಿಗೆ ಪಕ್ಷ ಸಂಘಟನೆಯಲ್ಲಿ ದುಡಿದಿದ್ದರು, ಉತ್ತರ ಕರ್ನಾಟಕದಿಂದ ಕೇವಲ ಅವರು ಮಾತ್ರ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾಗುತ್ತಿದ್ದರು ಎಂದು ಹೇಳಿದರೆ ಅತಿಶಯೋಕ್ತಿ ಅನಿಸದು ಎಂದು ತಂಗಡಿಗಿ ಹೇಳಿದರು.

ಇದನ್ನೂ ಓದಿ:   ಬಸನಗೌಡ ಯತ್ನಾಳ್ ಇಚ್ಛಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳೋದು ಕಷ್ಟ: ಎಂಬಿ ಪಾಟೀಲ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.