AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on: Oct 01, 2026 | 4:12 PM

Share

ಉತ್ತರಾಖಂಡದ ಕುಮಾಂವ್ ಪ್ರದೇಶದಲ್ಲಿ ಬೃಹತ್ ಭೂಕುಸಿತ ಸಂಭವಿಸಿದ್ದು, ಪರ್ವತದ ಭಾಗವೊಂದು ದಿಢೀರನೇ ಕುಸಿದು ಬೃಹತ್ ಪ್ರಮಾಣದ ಬಂಡೆಗಳು ಮತ್ತು ಮಣ್ಣು ಕೆಳಕ್ಕೆ ಜಾರುವ ಭೀಕರ ದೃಶ್ಯ ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಗುಡ್ಡದ ಒಂದು ಭಾಗ ಸಂಪೂರ್ಣವಾಗಿ ಕುಸಿದು, ಬೃಹತ್ ಕಲ್ಲುಗಳು ಹಾಗೂ ಮಣ್ಣಿನ ರಾಶಿ ಬೆಟ್ಟದ ಇಳಿಜಾರಿನಲ್ಲಿ ಭೋರ್ಗರೆಯುತ್ತಾ ಕೆಳಕ್ಕೆ ಹರಿಯುವುದು ಕಂಡುಬಂದಿದೆ. ಈ ಭೂಕುಸಿತದಿಂದಾಗಿ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ಅಥವಾ ಸಮೀಪದ ಜನವಸತಿ ಪ್ರದೇಶಗಳಿಗೆ ಆಗಿರುವ ಹಾನಿಯ ಕುರಿತು ತಕ್ಷಣಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಡೆಹ್ರಾಡೂನ್, ಅಕ್ಟೋಬರ್ 1: ಉತ್ತರಾಖಂಡದ ಕುಮಾಂವ್ ಪ್ರದೇಶದಲ್ಲಿ ಬೃಹತ್ ಭೂಕುಸಿತ ಸಂಭವಿಸಿದ್ದು, ಪರ್ವತದ ಭಾಗವೊಂದು ದಿಢೀರನೇ ಕುಸಿದು ಬೃಹತ್ ಪ್ರಮಾಣದ ಬಂಡೆಗಳು ಮತ್ತು ಮಣ್ಣು ಕೆಳಕ್ಕೆ ಜಾರುವ ಭೀಕರ ದೃಶ್ಯ ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಗುಡ್ಡದ ಒಂದು ಭಾಗ ಸಂಪೂರ್ಣವಾಗಿ ಕುಸಿದು, ಬೃಹತ್ ಕಲ್ಲುಗಳು ಹಾಗೂ ಮಣ್ಣಿನ ರಾಶಿ ಬೆಟ್ಟದ ಇಳಿಜಾರಿನಲ್ಲಿ ಭೋರ್ಗರೆಯುತ್ತಾ ಕೆಳಕ್ಕೆ ಹರಿಯುವುದು ಕಂಡುಬಂದಿದೆ. ಈ ಭೂಕುಸಿತದಿಂದಾಗಿ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ಅಥವಾ ಸಮೀಪದ ಜನವಸತಿ ಪ್ರದೇಶಗಳಿಗೆ ಆಗಿರುವ ಹಾನಿಯ ಕುರಿತು ತಕ್ಷಣಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಕಳೆದ ವಾರ ರಾಜ್ಯದ ತಗ್ಗು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದರೆ, ಎತ್ತರದ ಪರ್ವತ ಪ್ರದೇಶಗಳಲ್ಲಿ ಭಾರಿ ಹಿಮಪಾತ ದಾಖಲಾಗಿತ್ತು. ಇದರ ಬೆನ್ನಲ್ಲೇ ಈ ಭೂಕುಸಿತ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದ ಹಲವು ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More