ಶಿರಾಡಿಘಾಟ್​ನಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು

|

Updated on: Jul 31, 2024 | 9:16 PM

ಸಕಲೇಶಪುರ(Sakleshpur) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಲು ಸಮೀಪ ಗುಡ್ಡ ಕುಸಿತವಾಗಿದೆ. ಪರಿಣಾಮ ಕೆಲವು ವಾಹನಗಳು ಮಣ್ಣಿನಡಿ ಸಿಲುಕಿದ್ದಾವೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ಬೃಹತ್​ ಕಂಟೇನರ್ ಪಲ್ಟಿಯಾಗಿದ್ದು, ಚಾಲಕ ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಸಿಲುಕಿದ್ದಾನೆ.

ಹಾಸನ, ಜು.31:  ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಭಾರಿ ಮಳೆಗೆ ಸಕಲೇಶಪುರ(Sakleshpur) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಲು ಸಮೀಪ ಗುಡ್ಡ ಕುಸಿತವಾಗಿದೆ. ಪರಿಣಾಮ ಕೆಲವು ವಾಹನಗಳು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ್ದಾವೆ. ಇನ್ನು ಗುಡ್ಡ ಕುಸಿತದ ರಭಸಕ್ಕೆ ಬೃಹತ್​ ಕಂಟೇನರ್ ಪಲ್ಟಿಯಾಗಿದ್ದು, ಚಾಲಕ ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಈ ಹಿನ್ನಲೆ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಹಲವು ವಾಹನಗಳು ಸಿಲುಕಿದ್ದಾವೆ. ಇಂದು(ಬುಧವಾರ) ಬೆಳಿಗ್ಗೆಯಷ್ಟೇ ಇದೇ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಭೇಟಿ ನೀಡಿದ್ದರು. ಸಂಜೆ ಮಳೆ ಹೆಚ್ಚಾದ ಹಿನ್ನಲೆಯಲ್ಲಿ ಬಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.

ರೈಲ್ವೆ ಹಳಿ‌ ಮೇಲೆ ಕಂಟೇನರ್ ಬೀಳುವ ಆತಂಕ

ಇನ್ನು ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿ ಕಂಟೇನರ್ ಇದ್ದು, ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕ ಹೆಚ್ಚಾಗಿದೆ. ಈಗಾಗಲೇ ಗುಡ್ಡ ಕುಸಿತದಿಂದ ಸಕಲೇಶಪುರ ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು, ದುರಸ್ತಿ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದೀಗ ದೊಡ್ಡತಪ್ಲು ಬಳಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿತದಿಂದ ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 31, 2024 09:12 PM