ಕುಸಿದು ಬಿದ್ದ ಬೃಹತ ಪೆಂಡಾಲ್: ವಿದ್ಯಾರ್ಥಿಗಳು, ಶಿಕ್ಷಕರು ಬಚಾವ್!
ಇಂದು (ಅ.21) ಸರ್ಕಾರಿ ಶಾಲಾ ಆವರಣದಲ್ಲಿ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತಿದ್ದು, ಕಬ್ಬಿಣದ ಶೀಟ್ ಅಳವಡಿಸಿದ್ದ ಬೃಹತ್ ಪೆಂಡಾಲ್ ಕುಸಿತವಾಗಿದೆ.
ಮಂಗಳೂರು: ಸರ್ಕಾರಿ ಶಾಲೆಯೊಂದರಲ್ಲಿ ಆಯೋಜಿಸಿದ್ದ ವಿಜ್ಞಾನ ಮೇಳದ ಪೆಂಡಾಲ್ (Pandal) ಕುಸಿದು ಹಲವು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗಾಯಗಳಾಗಿರುವಂತಹ ಘಟನೆ ಕೇರಳದ ಕಾಸರಗೋಡಿನ ಮಂಜೇಶ್ವರ ಬೇಕೂರಿನಲ್ಲಿ ನಡೆದಿದೆ. ಇಂದು (ಅ.21) ಸರ್ಕಾರಿ ಶಾಲಾ ಆವರಣದಲ್ಲಿ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತಿದ್ದು, ಕಬ್ಬಿಣದ ಶೀಟ್ ಅಳವಡಿಸಿದ್ದ ಬೃಹತ್ ಪೆಂಡಾಲ್ ಕುಸಿತವಾಗಿದೆ. ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ, ಕೆಲ ಶಿಕ್ಷಕರು ಮತ್ತು ಕಾರ್ಯಕ್ರಮದ ತೀರ್ಪುಗಾರರಿಗೂ ಗಾಯಗಳಾಗಿದ್ದು, ಮಂಗಲ್ಪಾಡಿ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 21, 2022 07:04 PM
Latest Videos