Heavy rains in Kodagu district: ಕೊಡಗು ಜಿಲ್ಲೆಯ ನಾನಾಭಾಗಗಳಲ್ಲಿ ಧಾರಾಕಾರ ಮಳೆ, ಬೇಸತ್ತ ಜನ

ಅರುಣ್​ ಕುಮಾರ್​ ಬೆಳ್ಳಿ

Updated on: Jun 03, 2023 | 6:59 PM

ಇದ್ದಕಿದ್ದಂತೆ ಮಳೆ ಧೋ ಅಂತ ಧರೆಗಿಳಿಯಲಾರಂಭಿಸಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ

ಕೊಡಗು:  ರಾಜ್ಯದ ಯಾವ ಭಾಗವನ್ನೂ ಅಕಾಲಿಕ ಮಳೆ (untimely rain) ಬಿಡುತ್ತಿಲ್ಲ ಮಾರಾಯ್ರೇ. ಯಾದಗಿರಿ, ಕಲಬುರಗಿ, ಬೀದರ್, ರಾಯಚೂರು, ಬೆಳಗಾವಿ, ಮೈಸೂರು, ಬೆಂಗಳೂರು-ಹೀಗೆ ಎಲ್ಲೆಡೆ ಮಳೆಯಾಗುತ್ತಿದೆ ಮತ್ತು ಜನ ಮಳೆಯಿಂದ ಬೇಸತ್ತು ಹೋಗುತ್ತಿದ್ದಾರೆ. ಇಲ್ನೋಡಿ, ಕೊಡಗು ಜಿಲ್ಲೆಯಲ್ಲೂ (Kodagu district) ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಜಿಲ್ಲೆಯ ಹಲವಾರು ಭಾಗಗಳಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ (overcast) ವಾತಾವರಣವಿತ್ತು. ಅದರೆ ಮಧ್ಯಾಹ್ನದ ನಂತರ ಮಳೆ ಧಾರಾಕಾರವಾಗಿ ಸುರಿಯಾರಂಭಿಸಿದೆ. ಇದ್ದಕಿದ್ದಂತೆ ಮಳೆ ಧೋ ಅಂತ ಧರೆಗಿಳಿಯಲಾರಂಭಿಸಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.