ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್
Bengaluru Traffic Jam: ಭಾರತ ಪಾಕಿಸ್ತಾನ ಯುದ್ಧಾತಂಕ ಮುಕ್ತವಾದ ನಂತರ ಇದೀಗ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿ ಪುನರಾರಂಭಗೊಳ್ಳುತ್ತಿದ್ದು, ಆರ್ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇದಕ್ಕಾಗಿ ತೆರಳಲು ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನತ್ತ ಧಾವಿಸುತ್ತಿದ್ದು, ಬೆಂಗಳೂರು ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಡಿಯೋ ಇಲ್ಲಿದೆ.
ಬೆಂಗಳೂರು, ಮೇ 17: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ರೈಡರ್ಸ್ ನಡುವಣ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪರಿಣಾಮವಾಗಿ ಬೆಂಗಳೂರು ನಗರದ ಹೃದಯಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರ್ಪೊರೇಷನ್ ಸರ್ಕಲ್, ಎಂ.ಜಿ.ರಸ್ತೆ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಕಬ್ಬನ್‌ಪಾರ್ಕ್ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್‌ನಿಂದ ಸವಾರರು ತೀವ್ರ ಪರದಾಟ ಪಡುವಂತಾಗಿದೆ. ಇಂದು ಸಂಜೆ 7.30ಕ್ಕೆ ಐಪಿಎಲ್ ಪಂದ್ಯ ಆರಂಭವಾಗಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 17, 2025 05:09 PM
Latest Videos

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್

6,6,6,6,6:: ಬಿರುಗಾಳಿ ಬ್ಯಾಟಿಂಗ್ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!

‘ಎಸ್ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್

ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
