ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್

Updated on: May 17, 2025 | 5:23 PM

Bengaluru Traffic Jam: ಭಾರತ ಪಾಕಿಸ್ತಾನ ಯುದ್ಧಾತಂಕ ಮುಕ್ತವಾದ ನಂತರ ಇದೀಗ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿ ಪುನರಾರಂಭಗೊಳ್ಳುತ್ತಿದ್ದು, ಆರ್​ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇದಕ್ಕಾಗಿ ತೆರಳಲು ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನತ್ತ ಧಾವಿಸುತ್ತಿದ್ದು, ಬೆಂಗಳೂರು ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ವಿಡಿಯೋ ಇಲ್ಲಿದೆ.

ಬೆಂಗಳೂರು, ಮೇ 17: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್​​​ರೈಡರ್ಸ್ ನಡುವಣ ಐಪಿಎಲ್‌ ಟಿ20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪರಿಣಾಮವಾಗಿ ಬೆಂಗಳೂರು ನಗರದ ಹೃದಯಭಾಗದಲ್ಲಿ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಕಾರ್ಪೊರೇಷನ್‌ ಸರ್ಕಲ್‌, ಎಂ.ಜಿ.ರಸ್ತೆ, ರಿಚ್ಮಂಡ್‌ ಸರ್ಕಲ್‌, ಶಾಂತಿನಗರ, ಕಬ್ಬನ್‌ಪಾರ್ಕ್‌ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ನಿಂದ ಸವಾರರು ತೀವ್ರ ಪರದಾಟ ಪಡುವಂತಾಗಿದೆ. ಇಂದು ಸಂಜೆ 7.30ಕ್ಕೆ ಐಪಿಎಲ್‌ ಪಂದ್ಯ ಆರಂಭವಾಗಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 17, 2025 05:09 PM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More