Assembly Polls; ರಾಜ್ಯದೆಲ್ಲೆಡೆ ಬಿಜೆಪಿ ಪರ ದೊಡ್ಡ ಅಲೆಯಿದೆ, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳೋದು ನಿಶ್ಚಿತ: ತೇಜಸ್ವೀ ಸೂರ್ಯ, ಸಂಸದ

ಅರುಣ್​ ಕುಮಾರ್​ ಬೆಳ್ಳಿ

Updated on: Mar 29, 2023 | 2:25 PM

ಚುನಾವಣೆಯು ಪ್ರಜಾಪ್ರಭುತ್ವದ ಒಂದು ದೊಡ್ಡ ಹಬ್ಬವಾಗಿದೆ, ರಾಜ್ಯದ ಜನತೆ 5-ವರ್ಷಗಳ ಅವಧಿಗೆ ಒಂದು ಸರ್ಕಾರವನ್ನು ಅಯ್ಕೆ ಮಾಡುವ ಮಹತ್ವದ ಸಂದರ್ಭ ಎಂದು ಸೂರ್ಯ ಹೇಳಿದರು.

ಗದಗ: ಚುನಾವಣಾ ಆಯೋಗ (Election Commission) ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮತ್ತು ಸಂಸದ ತೇಜಸ್ವೀ ಸೂರ್ಯ (Tejasvi Surya), ಚುನಾವಣೆಯು ಪ್ರಜಾಪ್ರಭುತ್ವದ (democracy) ಒಂದು ದೊಡ್ಡ ಹಬ್ಬವಾಗಿದೆ, ರಾಜ್ಯದ ಜನತೆ 5-ವರ್ಷಗಳ ಅವಧಿಗೆ ಒಂದು ಸರ್ಕಾರವನ್ನು ಅಯ್ಕೆ ಮಾಡುವ ಮಹತ್ವದ ಸಂದರ್ಭ ಎಂದು ಹೇಳಿದರು. ತಾನು ಹಳೆ ಮೈಸೂರು ಭಾಗ, ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ-ಎಲ್ಲ ಕಡೆ ಸುತ್ತಾಡಿದ್ದು ಬಿಜೆಪಿ ಪರ ಒಂದು ದೊಡ್ಡ ಅಲೆಯಿದ್ದು ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ತೇಜಸ್ವೀ ಸೂರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.