ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು ಹೀಗೆ
ಚಿಕ್ಕಮಗಳೂರಿನ ಕಳಸ ತಾಲ್ಲೂಕಿನ ಆನೆಗುಡ್ಡ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಡ್ರೋನ್ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳು ಕಾಡ್ಗಿಚ್ಚಿನ ತೀವ್ರತೆಯನ್ನು ಕಾಣಬಹುದು. ಕಳೆದ ಎರಡು ದಿನಗಳಿಂದ ಹೊತ್ತಿ ಉರಿಯುತ್ತಿರುವ ಈ ಕಾಡ್ಗಿಚ್ಚಿನಿಂದ ಸಸ್ಯ ಸಂಪತ್ತು ನಾಶವಾಗುತ್ತಿದೆ. ಅರಣ್ಯ ಇಲಾಖೆ ಈ ಬಗ್ಗೆ ತನಿಖೆ ನಡೆಸುತ್ತಿದೆ.
ಚಿಕ್ಕಮಗಳೂರು, ಫೆಬ್ರವರಿ 09: ಬೇಸಿಗೆ ಆರಂಭಕ್ಕೂ ಮುನ್ನವೇ ಎಲ್ಲೆಡೆ ರಣ ಬಿಸಿಲು ಶುರುವಾಗಿದೆ. ಅರಣ್ಯ ಪ್ರದೇಶದ ಹಲವೆಡೆ ಕಾಡ್ಗಿಚ್ಚು (Wildfire) ಹೊತ್ತಿಕೊಳ್ಳುತ್ತಿದೆ. ಚಿಕ್ಕಮಗಳೂರು ತಾಲೂಕಿನ ಕಳಸ ವ್ಯಾಪ್ತಿಯ ಆನೆಗುಡ್ಡ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಕಳೆದ ಎರಡು ದಿನಗಳಿಂದ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಸೋಲಾ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ಸಸ್ಯ ಸಂಪತ್ತು ನಾಶವಾಗಿದೆ. ಗುಡ್ಡದ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 09, 2025 10:28 AM