AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ಹಾತೊರೆಯುತ್ತಿದ್ದ ಪಾಕಿಸ್ತಾನವೀಗ ಕಂಗಾಲು; ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ

ನೀರಿಗಾಗಿ ಹಾತೊರೆಯುತ್ತಿದ್ದ ಪಾಕಿಸ್ತಾನವೀಗ ಕಂಗಾಲು; ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ

ಸುಷ್ಮಾ ಚಕ್ರೆ
|

Updated on: Aug 31, 2026 | 9:55 PM

Share

ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದ ನೀರಿನ ಮಟ್ಟವನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟಿನ ಹಲವು ಗೇಟ್‌ಗಳನ್ನು ತೆರೆಯಲಾಗಿದೆ. ಜಲಾನಯನ ಪ್ರದೇಶಗಳಲ್ಲಿ ಸತತ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಸುರಕ್ಷತಾ ದೃಷ್ಟಿಯಿಂದ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿದ್ದು, ನದಿಯ ಕೆಳಭಾಗಕ್ಕೆ ನಿಯಂತ್ರಿತ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.

ರಿಯಾಸಿ, ಆಗಸ್ಟ್ 31: ಮಧ್ಯಸ್ಥಿಕೆ ನ್ಯಾಯಾಲಯ ಸಿಂಧೂ ನದಿ ನೀರು ಒಪ್ಪಂದದ (Indus Water Treaty) ಪ್ರಕರಣದಲ್ಲಿ ಪಾಕಿಸ್ತಾನದ ಪರವಾಗಿ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿದ್ದ ಪಾಕಿಸ್ತಾನಕ್ಕೆ ಇದೀಗ ಭಾರತ ಶಾಕ್ ನೀಡಿದೆ. ಮಧ್ಯಸ್ಥಿಕೆ ನ್ಯಾಯಾಲಯವೇ ಅಕ್ರಮವಾಗಿ ರಚನೆಯಾಗಿದೆ ಎಂದಿರುವ ಭಾರತ ಆ ನ್ಯಾಯಾಲಯದ ಯಾವುದೇ ತೀರ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನಕ್ಕೆ ನಿರಾಸೆ ಉಂಟುಮಾಡಿದೆ. ಇದರ ಜೊತೆಗೆ ಸಲಾಲ್ ಅಣೆಕಟ್ಟೆಯ ಬಹುತೇಕ ಗೇಟ್​ಗಳನ್ನು ಓಪನ್ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಲೆಬಿಸಿ ಉಂಟುಮಾಡಿದೆ. ನೀರಿಗಾಗಿ ಭಾರತದ ಮುಂದೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಈಗ ಪ್ರವಾಹದ ಭೀತಿ ಎದುರಾಗಿದೆ.

ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಲಾಶಯದ ನೀರಿನ ಮಟ್ಟವನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟಿನ ಹಲವು ಗೇಟ್‌ಗಳನ್ನು ತೆರೆಯಲಾಗಿದೆ. ಜಲಾನಯನ ಪ್ರದೇಶಗಳಲ್ಲಿ ಸತತ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಸುರಕ್ಷತಾ ದೃಷ್ಟಿಯಿಂದ ಅಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿದ್ದು, ನದಿಯ ಕೆಳಭಾಗಕ್ಕೆ ನಿಯಂತ್ರಿತ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us