AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿ, ಇಲ್ಲಿದೆ ನೋಡಿ ಭಯಾನಕ ದೃಶ್ಯ

ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿ, ಇಲ್ಲಿದೆ ನೋಡಿ ಭಯಾನಕ ದೃಶ್ಯ

ಅಕ್ಷಯ್​ ಪಲ್ಲಮಜಲು​​
|

Updated on: Nov 22, 2025 | 4:11 PM

Share

ಉತ್ತರಪ್ರದೇಶದ ಮಥುರಾದಲ್ಲಿ ತಂದೆಯ ಎದುರೇ ಮಗಳನ್ನು ಅಪಹರಿಸಲು ಯತ್ನಿಸಿದ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಪ್ಪ-ಮಗಳನ್ನು ಅಡ್ಡಗಟ್ಟಿ, ಮಗಳನ್ನು ಎಳೆಯಲು ಪ್ರಯತ್ನಿಸಿದ್ದಾರೆ. ತಕ್ಷಣ ತಂದೆ ಸ್ಕೂಟರ್ ಸ್ಟಾರ್ಟ್ ಮಾಡಿ ಮಗಳನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುತ್ತದೆ.

ಉತ್ತರಪ್ರದೇಶ, ನ.22: ತಂದೆಯ ಮುಂದೆ ಮಗಳನ್ನು ಅಪಹರಿಸಲು ಪ್ರಯತ್ನಿಸಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮೊದಲು ಬೈಕ್​​​ನಲ್ಲಿ ಬಂದು, ಅದರಲ್ಲಿ ಒಬ್ಬ ಬೈಕ್​​​ನಿಂದ ಅಂಗಡಿಯ ಬಳಿ ಇಳಿದು, ಅಲ್ಲೇ ತಿರುಗಾಡುವುದನ್ನು ಕಾಣಬಹುದು. ಮತ್ತೊಬ್ಬ ಬೈಕ್​​ನಲ್ಲೇ ಮುಂದೆ ಹೋಗುತ್ತಾನೆ. ಅದೇ ದಾರಿಯಲ್ಲಿ ವ್ಯಕ್ತಿಯೊಬ್ಬರು ಮಗಳ ಜತೆ ಸ್ಕೂಟರ್​​ನಲ್ಲಿ ಬರುತ್ತಾರೆ. ಈ ವೇಳೆ ಬೈಕ್​​ನಲ್ಲಿ ಬಂದ ವ್ಯಕ್ತಿ ಅಪ್ಪ-ಮಗಳನ್ನು ಅಡ್ಡಗಟ್ಟಿ ಮಾತನಾಡಿಸುತ್ತಾನೆ. ಸ್ವಲ್ಪ ಹೊತ್ತಿನ ನಂತರ ಸ್ಕೂಟರ್​​ನಲ್ಲಿದ್ದ ಪುಟ್ಟ ಹುಡುಗಿಯನ್ನು ಎಳೆಯಲು ಪ್ರಯತ್ನಿಸುತ್ತಾನೆ.  ಸ್ಕೂಟರ್​​ನಲ್ಲಿದ್ದ ವ್ಯಕ್ತಿ, ಅಲ್ಲಿಂದ ತಪ್ಪಿಸಿಕೊಳ್ಳುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು @gharkekalesh ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಈ ವಿಡಿಯೋದಲ್ಲಿ ಶೀರ್ಷಿಕೆ ನೀಡಿದ್ದಾರೆ. ​​

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More