AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ

ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ

ಝಾಹಿರ್ ಯೂಸುಫ್
|

Updated on:Jan 29, 2026 | 10:07 AM

Share

ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ನಾಲ್ಕನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್​ಗಳ ವಿಜಯ ಸಾಧಿಸಿದೆ.

ವಿಶಾಖಪಟ್ಟಣದಲ್ಲಿ ನಡೆದ ಭಾರತದ ವಿರುದ್ಧದ 4ನೇ ಟಿ20 ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲ ಎಸೆತದಲ್ಲೇ ಅಭಿಷೇಕ್ ಶರ್ಮಾ ಅವರ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಸರಣಿಯಲ್ಲಿ ಇಬ್ಬರು ಬ್ಯಾಟರ್​ಗಳನ್ನು ಪಂದ್ಯದ ಮೊದಲ ಎಸೆತದಲ್ಲಿ ಔಟ್ ಮಾಡಿದ ಬೌಲರ್ ಎಂಬ ವಿಶ್ವ ದಾಖಲೆ ಮ್ಯಾಟ್ ಹೆನ್ರಿ ಪಾಲಾಗಿದೆ. ಜನವರಿ 25 ರಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಸಂಜು ಸ್ಯಾಮ್ಸನ್ ಅವರನ್ನು ಇನಿಂಗ್ಸ್​ನ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.

ಇದೀಗ ನಾಲ್ಕನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿ, ಒಂದೇ ಸರಣಿಯಲ್ಲಿ  ಇಬ್ಬರು ಆರಂಭಿಕರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದ ಐಸಿಸಿ ಪೂರ್ಣ ಸದಸ್ಯ ತಂಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಯನ್ನು ಮ್ಯಾಟ್ ಹೆನ್ರಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನುಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 215 ರನ್​ಗಳನ್ನು ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 165 ರನ್​ಗಳಿಸಿ ಆಲೌಟ್ ಆಗಿ 50 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ನಾಲ್ಕನೇ ಟಿ20 ಪಂದ್ಯದಲ್ಲಿ ಕಿವೀಸ್ ಪಡೆ 50 ರನ್​ಗಳ ವಿಜಯ ಸಾಧಿಸಿದೆ.

Published on: Jan 29, 2026 09:58 AM