ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ ಎಂಬಿ ಪಾಟೀಲ್ ಪರ ಬ್ಯಾಟಿಂಗ್
ಸಚಿವ ಎಂ.ಬಿ. ಪಾಟೀಲ್ ಅವರನ್ನು ಮುಖ್ಯಮಂತ್ರಿಯಾಗುವ ಲಕ್ಷಣ ಇದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಅವರು ಹೇಳಿದ್ದಾರೆ. ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಟೀಲ್ ಅವರಿಗೆ ಸಿಎಂ ಆಗುವ ಎಲ್ಲ ಲಕ್ಷಣಗಳಿವೆ ಎಂದು ಹೇಳಿದರು. ಇದಲ್ಲದೆ, ಮಂಡ್ಯದಲ್ಲಿ ವೃತ್ತ ಅಥವಾ ರಸ್ತೆಗೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಯೋಜನೆಯನ್ನು ಘೋಷಿಸಿದರು. ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.
ಮಂಡ್ಯ, ಮೇ 31: ಹಳೇ ಮೈಸೂರು ಭಾಗ ಒಕ್ಕಲಿಗರ ಪ್ರಾಭಲ್ಯ ಹೆಚ್ಚಾಗಿದೆ. ಮಂಡ್ಯ ಒಕ್ಕಲಿಗರ ಭದ್ರಕೋಟೆಯಾಗಿದೆ. ಒಕ್ಕಲಿಗರ ಭದ್ರಕೋಟೆಯಲ್ಲಿ ಲಿಂಗಾಯತ ನಾಯಕರ ಕಹಳೆ ಮೊಳಗಿದೆ. ಶುಕ್ರವಾರ ಮಂಡ್ಯದಲ್ಲಿ ಬಸವ ಜಯಂತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನ ಲಿಂಗಾಯತ ನಾಯಕರು, ಜೊತೆಗೆ ಒಕ್ಕಲಿಗ ನಾಯಕರೂ ಕೂಡ ಭಾಗಿಯಾಗಿದ್ದರು. ಈ ಕಾರ್ಯಕ್ರಮಲದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಕಾವರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ರವಿಕುಮಾರ್ ಅವರು ಮಂಡ್ಯದಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರ ಬ್ಯಾಟ್ ಬೀಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ ಶಾಸಕ ರವಿಕುಮಾರ್ ಗಣಿಗ, ಎಂ.ಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣ ಇದೆ ಎಂದಿದ್ದಾರೆ. “ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸಿಎಂ ಆಗುವ ಎಲ್ಲ ಲಕ್ಷಣ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಮ್ಮ ಜಿಲ್ಲೆಯ ಸುಪುತ್ರ, ಭವಿಷ್ಯದ ನಾಯಕ” ಎಂದು ಹೇಳಿದರು. ಮಂಡ್ಯದಲ್ಲಿನ ವೃತ್ತಕ್ಕೆ ಅಥವಾ ರಸ್ತೆಗೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುತ್ತೇವೆ ಎಂದಿದ್ದಾರೆ.

