ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಯೊಂದಿಗೆ ಡಿಕೆ ಶಿವಕುಮಾರ್ ಮನೆ ಕದ ತಟ್ಟಿದ ಎಂಬಿ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 03, 2025 | 1:51 PM

ಸಚಿವ ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವ ಸರ್ಕಾರದ ನಿರ್ಧಾರ ಸಾಧುವೋ ಅಥವಾ ಅದು ಸರ್ಕಾರೀ ಬೊಕ್ಕಸದ ಮೇಲೆ ಹೊರೆಯೋ ಅಂತ ಸರ್ಕಾರದ ಪ್ರತಿನಿಧಿಗಳು ಹೇಳಬೇಕು. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಅಂತ ಪರಮೇಶ್ವರ್​ರಂಥ ನಾಯಕರೇ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಳುತ್ತಾರೆಂದರೆ ಸರ್ಕಾರದ ಹಣಕಾಸು ಸ್ಥಿತಿ ಹೇಗಿದೆ ಅಂತ ಗೊತ್ತಾಗುತ್ತದೆ.

ಬೆಂಗಳೂರು, ಜುಲೈ 3: ಬೃಹತ್ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ನಗರದಲ್ಲಿ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಮುಂದಿನ ಸಚಿವ ಸಂಪುಟ ಸಭೆ ವಿಜಯಪುರದಲ್ಲಿ ನಡೆಯಲಿದೆ, ತನ್ನ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪವೊಂದನ್ನು ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರಿಗೆ ಸಲ್ಲಿಸಬೇಕಿತ್ತು, ಅದಕ್ಕಾಗಿ ಬಂದೆ ಎಂದು ಹೇಳಿದರು. ಬಬಲೇಶ್ವರದಲ್ಲಿ ಒಂದು ನೈಸರ್ಗಿಕ ಜಲಪಾತವಿದೆ, ಅದರ ಬಳಿ ಜಲಾಶಯವೊಂದನ್ನು ನಿರ್ಮಿಸಿದರೆ ಕ್ಷೇತ್ರದ ಜನರಿಗೆ 6.8 ಟಿಎಂಸಿ ಕುಡಿಯುವ ನೀರು ಸಿಗಲಿದೆ ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ:   ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.