AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೆನೆದು ಡಾ. ಎಂ.ಸಿ. ಸುಧಾಕರ್​ ಕಣ್ಣೀರು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: May 29, 2026 | 12:53 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೆನೆದು ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಸಿದ್ದರಾಮಯ್ಯ ಎಲ್ಲಾ ವರ್ಗಗಳನ್ನು ಸಮಾನವಾಗಿ ಕಂಡ, ಬಡವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ ಎಂದು ಅವರು ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಉಳಿದು, ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ 2028ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

ದಾವಣಗೆರೆ, ಮೇ 29: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆ ದಾವಣಗೆರೆಯಲ್ಲಿ ಮಾಜಿ ಸಚಿವ ಡಾ.ಎಂ.ಸಿ.ಸುಧಾಕರ್​ ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯರನ್ನು ಕಳೆದ 2-3 ದಿನಗಳಿಂದ ನೋಡಲು ಆಗುತ್ತಿಲ್ಲ. ಅವರು ಎಲ್ಲಾ ವರ್ಗಗಳನ್ನು ಸಮಾನವಾಗಿ ತೆಗೆದುಕೊಂಡು ಹೋದ ನಾಯಕರಾಗಿದ್ದು, ಎಲ್ಲಾ ಸಮುದಾಯಕ್ಕೆ ಸಮಾನತೆ ನೀಡಿದ ವ್ಯಕ್ತಿ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಹಿನ್ನೆಲೆ ಸಂಪುಟ ವಿಸರ್ಜನೆಗೊಂಡಿದ್ದು, ಡಿ.ಕೆ.ಶಿವಕುಮಾರ್ ನೂತನ​ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More