AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ, ಭಾರೀ ಆಕ್ರೋಶ

ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ, ಭಾರೀ ಆಕ್ರೋಶ

ವಿನಾಯಕ ಬಡಿಗೇರ್​
| Edited By: |

Updated on:Feb 06, 2026 | 11:24 AM

Share

ಬಳ್ಳಾರಿಯ ನಾಗಲಕೇರಿಯ ವೀರ ಬಾಲಾಂಜನೇಯ ದೇವಸ್ಥಾನದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿವೆ. ಬೆಳಿಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸ ಕಂಡು ದಿಗ್ಭ್ರಮೆಗೊಂಡಿದ್ದಾರೆ. ಇದು ದುಷ್ಕರ್ಮಿಗಳ ಕೃತ್ಯ ಎಂದು ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಮುಖಂಡರು ಆರೋಪಿಸಿದ್ದು, ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬಳ್ಳಾರಿ, ಫೆ.6: ನಗರದ ನಾಗಲಕೇರಿಯಲ್ಲಿರುವ ಐತಿಹಾಸಿಕ ವೀರ ಬಾಲಾಂಜನೇಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಶುಕ್ರವಾರ ಬೆಳಿಗ್ಗೆ 5:30 ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು , ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸದ ತುಂಡುಗಳನ್ನು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ, ನೂರಾರು ಭಕ್ತರು ದೇವಸ್ಥಾನದ ಬಳಿ ಜಮಾಯಿಸಿದ್ದು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬಿಜೆಪಿ ಮುಖಂಡರು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ. ದೇವಸ್ಥಾನದ ಪ್ರಾಂಗಣದಲ್ಲಿ ಮಾಂಸ ಪತ್ತೆಯಾದ ಘಟನೆಯು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದೆ ಎಂದು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರ ಪ್ರಕಾರ, ಇದು ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಲು ದುಷ್ಕರ್ಮಿಗಳು ನಡೆಸಿರುವ ಕೃತ್ಯವಾಗಿದೆ. ಪತ್ತೆಯಾದ ಮಾಂಸವು ಗೋಮಾಂಸದ ತುಂಡುಗಳೆಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆ ನಡೆದಿರುವ ಕುರಿತು ತನಿಖೆ ಕೈಗೊಂಡಿದ್ದಾರೆ. ಹಿಂದೂಪರ ಸಂಘಟನೆಗಳ ಮುಖಂಡರು ನೀಡಿರುವ ಹೇಳಿಕೆ ಪ್ರಕಾರ, “ಇದು ಬೀದಿ ನಾಯಿಗಳು ತಂದು ಹಾಕಿದಲ್ಲ, ನಾಯಿಗಳು ಮಾಂಸದ ಕವರ್ ಅನ್ನು ಅಷ್ಟು ನೀಟಾಗಿ ತಂದು ಇಡಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ. ಈ ಘಟನೆಯ ಕುರಿತು 24 ಗಂಟೆಗಳ ಒಳಗಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಗಳು ಪೊಲೀಸರನ್ನು ಒತ್ತಾಯಿಸಿದ್ದಾರೆ. ಇನ್ನು ಕೆಲವು ಸ್ಥಳಿಯರು ಇದು ಮನುಷ್ಯರು ಮಾಡಿದ ಕೃತ್ಯ ಅಲ್ಲ. ನಾವು 40-45 ವರ್ಷದಿಂದ ನೋಡ್ತಿದ್ದೇವೆ. ಎಲ್ಲರೂ ಪ್ರತೀ ದಿನ ಪೂಜೆ ಮಾಡ್ತೇವೆ. ಇದು ಐತಿಹಾಸಿಕ ದೇವಸ್ಥಾನವಾಗಿದೆ. ಪ್ರತೀ ವರ್ಷ ರಾಮನವಮಿ ಸೇರಿದಂತೆ ಎಲ್ಲಾ ಹಬ್ಬ ಆಚರಣೆ ಮಾಡ್ತೇವೆ. ಈ ಮಾಂಸವನ್ನು ನಾಯಿ ಅಥವಾ ಬೆಕ್ಕು ತಂದು ಹಾಕಿರಬಹುದು. ಈ ಬಗ್ಗೆ ಸೂಕ್ತ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 06, 2026 11:23 AM