ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ

Updated on: Feb 13, 2026 | 2:23 PM

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಜಿಬಿಎ ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸೂಚನೆ ನೀಡಿದ್ದು, ಹಬ್ಬದ ದಿನದಂದು ಯಾವುದೇ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More