‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

| Updated By: ಮದನ್​ ಕುಮಾರ್​

Updated on: Feb 02, 2022 | 9:49 AM

ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಡಾರ್ಲಿಂಗ್​ ಕೃಷ್ಣ ಮತ್ತು ವಿಲನಾ ನಾಗರಾಜ್​ ಅವರ ಚಾರ್ಮ್​ ಹೆಚ್ಚಿತು. ಹಲವು ಕಾಲದಿಂದ ಪ್ರೀತಿಸುತ್ತಿದ್ದ ಅವರು ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ.

‘ಲವ್​ ಮಾಕ್ಟೇಲ್​’ (Love Mocktail) ಸಿನಿಮಾ ಸೂಪರ್​ ಡೂಪರ್​ ಹಿಟ್​ ಆಗಿತ್ತು. ಈ ಸಿನಿಮಾದ ಸೀಕ್ವೆಲ್​ ಈಗ ತೆರೆಗೆ ಬರುತ್ತಿದೆ. ಇದನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದಿದ್ದಾರೆ. ಮಂಗಳವಾರ (ಡಿಸೆಂಬರ್​ 1) ಚಿತ್ರದ ಟ್ರೇಲರ್ ರಿಲೀಸ್​ ಆಗಿದೆ. ಇಡೀ ಟ್ರೇಲರ್​ನಲ್ಲಿ ನಿಧಿ ನೆನಪುಗಳಲ್ಲೇ ಸಾಗುತ್ತಾನೆ ಕೃಷ್ಣ. ಟ್ರೇಲರ್​ ರಿಲೀಸ್​ಗೆ ಚಿತ್ರತಂಡ ಸುದ್ದಿಗೋಷ್ಠೀ ಕೂಡ ಹಮ್ಮಿಕೊಂಡಿತ್ತು. ‘ಲವ್​ ಮಾಕ್ಟೇಲ್​ 2’ (Love Mocktail) ಕಥೆ ಹೇಗಿರಲಿದೆ? ಇದರಲ್ಲೂ ಸ್ಯಾಡ್​ ಎಂಡಿಂಗ್​ ಇರಲಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಇದರ ಜತೆಗೆ ಕೆಲವರು ‘ಲವ್​ ಮಾಕ್ಟೇಲ್​ 3’ ಸಿನಿಮಾ ಬರಲಿದೆಯೇ ಎನ್ನುವ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಮಿಲನಾ (Mialana Nagaraj) ಉತ್ತರಿಸಿದ್ದಾರೆ. ‘ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಡಾರ್ಲಿಂಗ್​ ಕೃಷ್ಣ ಮತ್ತು ವಿಲನಾ ನಾಗರಾಜ್​ ಅವರ ಚಾರ್ಮ್​ ಹೆಚ್ಚಿತು. ಹಲವು ಕಾಲದಿಂದ ಪ್ರೀತಿಸುತ್ತಿದ್ದ ಅವರು ದಾಂಪತ್ಯ ಜೀವನಕ್ಕೂ ಕಾಲಿಟ್ಟರು. ಈಗ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅದರ ನಡುವೆ ಅವರು ‘ಲವ್​ ಮಾಕ್ಟೇಲ್​ 2’ ಚಿತ್ರದ ಕೆಲಸಗಳನ್ನು ಮುಗಿಸಿದ್ದಾರೆ. ರಚನಾ ಇಂದರ್​, ರೇಚಲ್​ ಡೇವಿಡ್​ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಲವ್ ಮಾಕ್ಟೇಲ್ 2’ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ‘ಯು’ ಪ್ರಮಾಣ ಪತ್ರ ಪಡೆದಿದೆ. ಚಿತ್ರಕ್ಕೆ ನಕುಲ್ ಅಭ್ಯಂಕರ್ ಸಂಗೀತ ನೀಡಿದ್ದು,ರಾಘವೇಂದ್ರ ಕಾಮತ್ ಸಾಹಿತ್ಯ ರಚಿಸಿದ್ದಾರೆ.

ಇದನ್ನೂ ಓದಿ:

ನಿಧಿ ನೆನಪಲ್ಲೇ ಸಾಗಿದ ‘ಲವ್ ಮಾಕ್ಟೇಲ್ 2’ ಟ್ರೇಲರ್; ನೀವಂದುಕೊಂಡಷ್ಟು ಸುಲಭವಿಲ್ಲ ಈ ಕೇಸ್

‘ಲವ್​ ಮಾಕ್ಟೇಲ್​ 2’ ಸಿನಿಮಾ ಸುದ್ದಿಗೋಷ್ಠಿ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ