ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್, ದಿಂಬು
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಡುತ್ತದೆ. ಆದ್ದರಿಂದ ಅವರಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ನೀಡಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ಬೆಡ್ ಮತ್ತು ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖಿಸಿದ್ದರು. ಜಿಲ್ಲಾ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ಈ ವಸ್ತುಗಳನ್ನು ತರಿಸಲಾಗಿದೆ.
ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಮೆಡಿಕಲ್ ಬೆಡ್ ಮತ್ತು ದಿಂಬು ನೀಡುವಂತೆ ಸಲಹೆ ನೀಡಿದ್ದಾರೆ. ಮೆಡಿಕಲ್ ವರದಿ ಬಂದ ಬಳಿಕ ಜೈಲಾಧಿಕಾರಿಗಳು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಿಂದ ಮೆಡಿಕಲ್ ಬೆಡ್ ಹಾಗೂ ದಿಂಬು ತಂದು ಕೊಡಲಾಗಿದೆ. ಮೇಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಇಂದು (ಅಕ್ಟೋಬರ್ 16) ಈ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos