ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ: ಮಗಳ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತಾಯಿ

Edited By:

Updated on: Jan 28, 2026 | 10:50 PM

ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.

ಧಾರವಾಡ,(ಜನವರಿ 28): ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿ. ಶಿವಮೊಗ್ಗ ಮೂಲದ ಡಾ.ಪ್ರಜ್ಞಾ, ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ (ಜನವರಿ 27) ಅಷ್ಟೇ ಆಕೆಯ ತಂದೆ-ತಾಯಿ ಕೂಡ ಬಂದು ಮಾತನಾಡಿಸಿಕೊಂಡು ಹೋಗಿದ್ದರು. ಆದ್ರೆ, ಇದೀಗ ಸಾವಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಮಗಳ ಸಾವಿನ ಬಗ್ಗೆ ತಾಯಿ ಪ್ರತಿಕ್ರಿಯಿಸಿದ್ದು, ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: Dharwad: ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

Published on: Jan 28, 2026 07:58 PM
Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More