ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ! ಜನೌಷಧಿ ಕೇಂದ್ರ, ಅಪೊಲೋ​, ಮೆಡ್ ಪ್ಲಸ್ ಓಪನ್

Edited By:

Updated on: May 20, 2026 | 10:48 AM

ಕರ್ನಾಟಕದಲ್ಲಿ ಮೆಡಿಕಲ್ ಶಾಪ್‌ಗಳ ಬಂದ್‌ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಔಷಧಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳ ಔಷಧ ಮಳಿಗೆಗಳು, ಜನೌಷಧಿ ಕೇಂದ್ರಗಳು, ಅಪೋಲೋ ಮತ್ತು ಮೆಡ್‌ಪ್ಲಸ್ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಆನ್‌ಲೈನ್ ವಿತರಣೆ ಮತ್ತು ಕಾರ್ಪೊರೇಟ್ ನೀತಿಗಳಿಂದಾಗಿ ಈ ಮಳಿಗೆಗಳು ಬಂದ್‌ಗೆ ಬೆಂಬಲ ನೀಡಿಲ್ಲ.

ಬೆಂಗಳೂರು, ಮೇ 20: ಕರ್ನಾಟಕದಲ್ಲಿ ಮೆಡಿಕಲ್ ಶಾಪ್‌ಗಳ ಬಂದ್‌ ನಡುವೆಯೂ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧ ಮಳಿಗೆಗಳು, ಜನೌಷಧಿ ಕೇಂದ್ರಗಳು, ಅಪೋಲೋ ಫಾರ್ಮಸಿಗಳು ಮತ್ತು ಮೆಡ್‌ಪ್ಲಸ್ ಶಾಖೆಗಳು ಎಂದಿನಂತೆ ತೆರೆದಿವೆ. ಕಾರ್ಪೊರೇಟ್ ಸ್ವಾಮ್ಯದ ಅಪೋಲೋ ಮತ್ತು ಮೆಡ್‌ಪ್ಲಸ್‌ನಂತಹ ಔಷಧ ಮಳಿಗೆಗಳು ಬಂದ್‌ಗೆ ಬೆಂಬಲ ನೀಡಿಲ್ಲ. ಇವು ಆನ್‌ಲೈನ್ ವಿತರಣೆ ಸೇವೆಗಳನ್ನು ಸಹ ಒದಗಿಸುತ್ತಿವೆ. ಅಲ್ಲದೆ, ಸರ್ಕಾರಿ ಸ್ವಾಮ್ಯದ ಜನೌಷಧಿ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಖಾಸಗಿ ಮೆಡಿಕಲ್ ಸ್ಟೋರ್‌ಗಳು ನಿರ್ದಿಷ್ಟ ಒಪ್ಪಂದಗಳ ಕಾರಣದಿಂದ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ. ಇದರಿಂದ ಸಾರ್ವಜನಿಕರಿಗೆ ಔಷಧಗಳ ಕೊರತೆ ಸಮಸ್ಯೆ ಅಷ್ಟಾಗಿ ಎದುರಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More