ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!

Updated on: May 17, 2026 | 10:22 AM

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಹೆಚ್ಚಾಗುವ ಭೀತಿ ಇದೆ ಎಂದು ಮೆಡಿಕಲ್ ವಿತರಕರು ತಿಳಿಸಿದ್ದಾರೆ. ಸಾಗಾಣಿಕೆ ವೆಚ್ಚವೂ ಹೆಚ್ಚುತ್ತಿರುವುದರಿಂದ ಇದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಹೊರೆಯಾಗಲಿದೆ.

ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಹೆಚ್ಚಾಗುವ ಭೀತಿ ಇದೆ ಎಂದು ಮೆಡಿಕಲ್ ವಿತರಕರು ತಿಳಿಸಿದ್ದಾರೆ. ಸಾಗಾಣಿಕೆ ವೆಚ್ಚವೂ ಹೆಚ್ಚುತ್ತಿರುವುದರಿಂದ ಇದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡ ಹೊರೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More