AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಗಣಪತಿ ಶರ್ಮಾ
|

Updated on: Apr 04, 2026 | 2:01 PM

Share

ಗಲ್ಫ್ ಯುದ್ಧದಿಂದಾಗಿ ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10-15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದರಿಂದ ರೋಗಿಗಳಿಗೆ ಮತ್ತು ವಿತರಕರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಔಷಧಿ ಸಂಘಟನೆಗಳು ಆತಂಕ ವ್ಯಕ್ತಪಡಿಸಿ, ತುರ್ತು ಕ್ರಮಕ್ಕೆ ಮನವಿ ಮಾಡಿವೆ.

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸದ್ಯಕ್ಕೆ ಔಷಧಿಗಳ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲವಾದರೂ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಸಮಸ್ಯೆ ಸೃಷ್ಟಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪೆಟ್ರೋಕೆಮಿಕಲ್ಸ್ ಮತ್ತು ಎಕ್ಸಿಪಿಯೆಂಟ್ಸ್ (ಬೈಂಡಿಂಗ್ ಏಜೆಂಟ್, ಸ್ಟಾರ್ಚ್ ಪೌಡರ್) ಬೆಲೆಗಳು ಈಗಾಗಲೇ ಹೆಚ್ಚಾಗಿವೆ. ಎರಡು-ಮೂರು ತಿಂಗಳ ನಂತರ ಮಾರುಕಟ್ಟೆಗೆ ಬರುವ ಹೊಸ ಔಷಧಿಗಳ ಬೆಲೆ ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More