ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ

Updated on: Dec 19, 2025 | 2:21 PM

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎಲ್ಲರೂ ಕಣ್ತುಂಬಿಕೊಳ್ಳುತ್ತಿದ್ದಾರೆ. ಅವರ ಪತ್ನಿಗೆ ಈ ಸಿನಿಮಾ ಸಾಕಷ್ಟು ಇಷ್ಟ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ದರ್ಶನ್ ಅವರ ತಾಯಿ ಈ ಚಿತ್ರವನ್ನು ನೋಡಿದರು ಮತ್ತು ಸಂತಸ ಹೊರಹಾಕಿದರು. ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಅವರು ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರದ ಮೊದಲ ದಿನ ಮೊದಲ ಶೋನ ದರ್ಶನ್ ಪತ್ನಿ ವಿಜಯಲಕ್​ಷ್ಮೀ ಹಾಗೂ ಮಗ ವಿನೀಶ್ ವೀಕ್ಷಣೆ ಮಾಡಿದ್ದರು. ಸಿನಿಮಾ ರಿಲೀಸ್ ಆದ ಒಂದು ವಾರದ ಬಳಿಕ ಮೀನಾ ತೂಗುದೀಪ್ ಅವರು ಸಿನಿಮಾ ನೋಡಿದ್ದಾರೆ. ಮೈಸೂರಿನ ಡಿಆರ್​ಸಿ ಚಿತ್ರಮಂದಿರದಲ್ಲಿ ‘ಡೆವಿಲ್’ ವೀಕ್ಷಿಸಿದರು. ಅಭಿಮಾನಿಗಳು, ಸ್ನೇಹಿತರ ಜೊತೆ ಸಿನಿಮಾ ನೋಡಿದ್ದು ವಿಶೇಷ. ಸಿನಿಮಾ ನೋಡಿದ ಬಳಿಕ ಅವರು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 19, 2025 02:19 PM
Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More