ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಮುಖ್ಯಮಂತ್ರಿ ಸಿದ್ದರಾಮಯ್ಯ

|

Updated on: Jun 28, 2024 | 1:32 PM

ರಾಜ್ಯದಿಂದ ಕೇಂದ್ರದಲ್ಲಿ ಮಂತ್ರಿಗಳಾಗಿರುವ ನಿರ್ಮಲಾ ಸೀತಾರಾಮನ್, ಹೆಚ್ ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ ಮತ್ತು ವಿ ಸೋಮಣ್ಣ ನಿನ್ನೆ ತಾವು ಕರೆದು ಸಭೆಯಲ್ಲಿ ಭಾಗಿಯಾಗಿದ್ದರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಅವರ ಎಡಪಕ್ಕ ಹೆಚ್ ಕೆ ಪಾಟೀಲ್ ಕೂತಿದ್ದರೆ ಬಲಭಾಗದಲ್ಲಿ ಕೆಜೆ ಜಾರ್ಜ್ ಇದ್ದರು.

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ಸಂಪುಟದ ಕೆಲ ಸಚಿವರೊಂದಿಗೆ ನಗರದ ಖಾಸಗಿ ಹೋಟೆಲೊಂದರಲ್ಲಿ 18 ನೇ ಲೋಕಸಭೆಗೆ ಆಯ್ಕೆಯಾಗಿರುವ ಎಲ್ಲ ಪಕ್ಷಗಳ ಸಂಸದರು, ರಾಜ್ಯಸಭಾ ಸದಸ್ಯರು ಮತ್ತು ಕೇಂದ್ರದಲ್ಲಿ ಮಂತ್ರಿಗಳಾಗಿರುವ ರಾಜ್ಯದ ಸಂಸದರೊಂದಿಗೆ ಸಭೆಯೊಂದನ್ನು ನಡೆಸಿದರು. ಅದಕ್ಕೆ ಸಂಬಂಧಿಸಿದಂತೆ ಇವತ್ತು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ ಯೋಜನೆಗಳು ಮತ್ತು ರಾಜ್ಯದ ಪ್ರಸ್ತಾವಗಳನ್ನು ಎಲ್ಲ ಸಂಸದರ ಗಮನಕ್ಕೆ ತರುವುದು ಮತ್ತು ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ ಅವುಗಳನ್ನು ಮಂಜೂರು ಮಾಡಿಸಿಕೊಳ್ಳಲು ಎಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮನವರಿಕೆ ಮಾಡಿಕೊಡಲು ಸಭೆಯನ್ನು ನಡೆಸಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು. ಸಭೆಯಲ್ಲಿ ಹೆಚ್ಚು ಕಡಿಮೆ ಎಲ್ಲ ಸಂಸದರು ಭಾಗಿಯಾಗಿದ್ದರೆಂದು ಮತ್ತು ಸಭೆಯು ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು!

Follow us on