ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದರೆ ಕಾಂಗ್ರೆಸ್ ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Sep 27, 2023 | 7:08 PM

ಮಲ್ಲಿಕಾರ್ಜುನ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಸರ್ಕಾರದ ಭಾಗವಾಗಿದ್ದಾರೆ, ಕ್ಷೇತ್ರದ ಕೆಲಸಗಳ ಸಲುವಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ, ಭೇಟಿ ಮಾಡಿದಾಕ್ಷಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಭಾವಿಸುವುದು ತಪ್ಪು ಎಂದು ರೇಣುಕಾಚಾರ್ಯ ಹೇಳಿದರು.

ದಾವಣಗೆರೆ: ಬಿಎಸ್ ಯಡಿಯೂರಪ್ಪ (BS Yediyurappa) ಅದರ್ಶ ಅನ್ನುತ್ತಲೇ ಕಾಂಗ್ರೆಸ್ ಕಡೆ ಮುಖಮಾಡಿ ನಿಂತಿದ್ದೀರಲ್ಲ ಅಂತ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಕೋಪಗೊಂಡರು. ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ಹೋಗುವುದು, ಕಾಂಗ್ರೆಸ್ ನಾಯಕರನ್ನು ಭೇಟಿಯಾಗುವುದರ ಅರ್ಥ ಕಾಂಗ್ರೆಸ್ ಪಕ್ಷ ಸೇರ್ತಿದ್ದೀನಿ ಅಂತಲ್ಲ ಎಂದು ಅವರು ಹೇಳಿದರು. ಎಸ್ ಎಸ್ ಮಲ್ಲಿಕಾರ್ಜುನ (SS Mallikarjun) ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ, ಅಡಕೆ ಬೆಳೆ ನಶಿಸುತ್ತಿರವುದರಿಂದ ಭದ್ರಾನಾಲೆಗೆ ನೀರು ಹರಿಸುವಂತೆ ಮನವಿ ಮಾಡಲು ಅವರಲ್ಲಿಗೆ ಹೋಗಿದ್ದಾಗಿ ರೇಣುಕಾಚಾರ್ಯ ಹೇಳಿದರು, ಮಲ್ಲಿಕಾರ್ಜುನ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮೊದಲಾದವರೆಲ್ಲ ಸರ್ಕಾರದ ಭಾಗವಾಗಿದ್ದಾರೆ, ಕ್ಷೇತ್ರದ ಕೆಲಸಗಳ ಸಲುವಾಗಿ ಅವರನ್ನು ಭೇಟಿಯಾಗಬೇಕಾಗುತ್ತದೆ, ಭೇಟಿ ಮಾಡಿದಾಕ್ಷಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದೇನೆ ಅಂತ ಭಾವಿಸುವುದು ತಪ್ಪು ಎಂದು ರೇಣುಕಾಚಾರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.