AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​

Naatu Naatu: ಮಗನ ಸಿನಿಮಾದ ಹಾಡಿಗೆ ಆಸ್ಕರ್​ ಪ್ರಶಸ್ತಿ; ಮೆಗಾಸ್ಟಾರ್​ ಜಿರಂಜೀವಿ ಮೊದಲ ರಿಯಾಕ್ಷನ್​

ಮದನ್​ ಕುಮಾರ್​
|

Updated on:Mar 13, 2023 | 4:40 PM

Share

Mega Star Chiranjeevi | Ram Charan: ಆಸ್ಕರ್​ ಪ್ರಶಸ್ತಿ ಗೆಲ್ಲುವ ಮೂಲಕ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. ಈ ಸಾಧನೆ ಬಗ್ಗೆ ಮೆಗಾ ಸ್ಟಾರ್​ ಚಿರಂಜೀವಿ ಅವರು ನೀಡಿದ ಮೊದಲ ಪ್ರತಿಕ್ರಿಯೆ ಇಲ್ಲಿದೆ.

ತೆಲುಗಿನ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು (Naatu Naatu Song) ಆಸ್ಕರ್​ ಪ್ರಶಸ್ತಿ ಗೆದ್ದಿರುವುದು ಇಡೀ ಭಾರತಕ್ಕೆ ಹೆಮ್ಮೆ ತಂದಿದೆ. ಅದರಲ್ಲೂ ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಹೆಚ್ಚು ಸಂಭ್ರಮಿಸುತ್ತಿದ್ದಾರೆ. ರಾಮ್​ ಚರಣ್ (Ram Charan)​, ಜೂನಿಯರ್​ ಎನ್​ಟಿಆರ್​ ನಟನೆಯ ‘ನಾಟು ನಾಟು..’ ಸಾಂಗ್​ ಜಾಗತಿಕ ಮಟ್ಟದಲ್ಲಿ ಸೌಂಡು ಮಾಡಿದೆ. ಪುತ್ರನ ಸಾಧನೆ ಬಗ್ಗೆ ‘ಮೆಗಾ ಸ್ಟಾರ್​’ ಚಿರಂಜೀವಿ (Mega Star Chiranjeevi) ಅವರು ಬಹಳ ಹೆಮ್ಮೆಪಡುತ್ತಿದ್ದಾರೆ. ಆಸ್ಕರ್​ ಸಿಕ್ಕ ಖುಷಿಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಎಲ್ಲರಿಗೂ ಅವರು ಅಭಿನಂದನೆ ತಿಳಿಸಿದ್ದಾರೆ. ಚಿರಂಜೀವಿ ನೀಡಿದ ಮೊದಲ ಪ್ರತಿಕ್ರಿಯೆ ಈ ವಿಡಿಯೋದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Mar 13, 2023 04:40 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More