AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಮದನ್​ ಕುಮಾರ್​
|

Updated on: Mar 04, 2026 | 10:33 PM

Share

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್, ಆಶಿಕಾ ರಂಗನಾಥ್, ಸುಕುಮಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ.

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ (Megastar Chiranjeevi), ಆಶಿಕಾ ರಂಗನಾಥ್, ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕಂಗೊಳಿಸಿದರು. ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಯಶಸ್ಸು ಕಂಡಿದ್ದೇ ತೆಲುಗು ಚಿತ್ರರಂಗದಲ್ಲಿ. ತಮಿಳಿನಲ್ಲೂ ಅವರು ಬೇಡಿಕೆ ಹೊಂದಿದ್ದಾರೆ. ಟಾಲಿವುಡ್, ಕಾಲಿವುಡ್ ಮುಂತಾದ ಚಿತ್ರರಂಗದಿಂದ ಅನೇಕ ಸೆಲೆಬ್ರಿಟಿಗಳು ಆರತಕ್ಷತೆಗೆ (Wedding Reception) ಬಂದು ನವ ದಂಪತಿಗೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us